ಕರ್ನಾಟಕ

karnataka

ETV Bharat / state

ಮೂಲೆಗುಂಪಾದ ಪಾರ್ಕಿಂಗ್ ಸರ್ವೇ: ಹು-ಧಾ ಪಾಲಿಕೆ ನೋಟಿಸ್​ಗಿಲ್ಲ ಕಿಮ್ಮತ್ತು

ಹುಬ್ಬಳ್ಳಿಯಲ್ಲಿ ಹಲವಾರು ವರ್ಷಗಳಿಂದ ವಾಹನ ದಟ್ಟಣೆ ಹೆಚ್ಚಾಗಿದೆ. ಅಲ್ಲದೇ ಪಾರ್ಕಿಂಗ್​ಗೆ ಸ್ಥಳವೇ ಇಲ್ಲದೆ ಸವಾರರಿಗೆ ವಾಹನಗಳನ್ನು ಪಾರ್ಕ್ ಮಾಡುವುದೇ ದೊಡ್ಡ ಸವಾಲಾಗಿದೆ.

By

Published : Jun 20, 2022, 5:55 PM IST

ಪಾರ್ಕಿಂಗ್
ಪಾರ್ಕಿಂಗ್

ಹುಬ್ಬಳ್ಳಿ:ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಪಾರ್ಕಿಂಗ್ ಸಮಸ್ಯೆ ಹೆಚ್ಚುತ್ತಿದ್ದು ಜನರು ಹೈರಾಣಾಗಿದ್ದಾರೆ. ಕಳೆದ 5 ವರ್ಷಗಳ ಹಿಂದೆ ಪಾಲಿಕೆ ನಡೆಸಿದ್ದ ಸರ್ವೇ ಮೂಲೆಗುಂಪಾಗಿದೆ. ಹಾಗಾಗಿ, ಜನರಿಗೆ ವಾಹನ ಪಾರ್ಕಿಂಗ್ ಜಾಗ ಹುಡುಕುವುದೇ ದೊಡ್ಡ ಸವಾಲು.


ನಗರದ ಸುಮಾರು 300ಕ್ಕೂ ಹೆಚ್ಚು ಬೃಹತ್ ಕಟ್ಟಡಗಳಲ್ಲಿ ಪಾರ್ಕಿಂಗ್ ವ್ಯವಸ್ಥೆಯೇ ಇಲ್ಲ. ಕಳೆದ ಐದು ವರ್ಷಗಳ ಹಿಂದೆಯೇ ಹು-ಧಾ ಮಹಾನಗರ ಪಾಲಿಕೆ ಪಾರ್ಕಿಂಗ್ ವ್ಯವಸ್ಥೆ ಇಲ್ಲದ ಕಟ್ಟಡಗಳ ಸರ್ವೇ ಮಾಡುವ ಮೂಲಕ ನೆಲಸಮ ಮಾಡುವ ಎಚ್ಚರಿಕೆ ನೀಡಿತ್ತು. ಆದರೆ ಅಲ್ಲಿಂದ ಇಲ್ಲಿಯವರೆಗೆ ಈ ಯೋಜನೆ ಕೇವಲ ನೋಟಿಸ್​ಗೆ ಮಾತ್ರ ಸೀಮಿತವಾಗಿದೆ. ಇದರಿಂದಾಗಿ ಅವಳಿನಗರದ ಜನರು ಪಾರ್ಕಿಂಗ್ ವ್ಯವಸ್ಥೆಗಾಗಿ ಪರದಾಡುವಂತಾಗಿದೆ.

ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ರಸ್ತೆಗಳ ಕಾರ್ಯ ನಡೆಯುತ್ತಿದ್ದು, ವಾಹನ ಓಡಾಟವೇ ನಗರದಲ್ಲಿ ಕಷ್ಟ ಎನ್ನುವಂತಾಗಿದೆ. ದೊಡ್ಡ ದೊಡ್ಡ ಕಟ್ಟಡಗಳ ಕೆಳಗೆ ವಾಹನ ನಿಲುಗಡೆಗೆ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದ್ದರೂ 300ಕ್ಕೂ ಹೆಚ್ಚು ಕಟ್ಟಡಗಳಲ್ಲಿ ವಾಹನಗಳನ್ನು ಪಾರ್ಕ್ ಮಾಡೋಕೆ ಜಾಗವೇ ಇಲ್ಲ. ಹಿಂದೆ ಕೊಟ್ಟ ಪಾಲಿಕೆಯ ನೋಟಿಸ್​ಗೂ ಸಹ ಕವಡೆ ಕಾಸಿನ ಕಿಮ್ಮತ್ತು ಇಲ್ಲದಾಗಿದೆ. ಪಾಲಿಕೆ ಸರ್ವೇ ಕಾರ್ಯವೇ ಸಂಪೂರ್ಣ ಕಾಲಹರಣ ಎನ್ನುತ್ತಿದ್ದಾರೆ ಇಲ್ಲಿನ ಜನ.

"ಕಟ್ಟಡಗಳ ಕೆಳಗೆ ಪಾರ್ಕಿಂಗ್ ವ್ಯವಸ್ಥೆ ಸೂಕ್ತವಾಗಿಲ್ಲ ಎಂದರೆ ಮುಲಾಜಿಲ್ಲದೆ ಅದನ್ನು ರಿಜೆಕ್ಟ್​ ಮಾಡುತ್ತಿದ್ದೇವೆ. ಒಂದು ವೇಳೆ ಪಾರ್ಕಿಂಗ್ ಜಾಗವನ್ನು ಬೇರೆ ಉದ್ದೇಶಕ್ಕೆ ಬಳಕೆ ಮಾಡುತ್ತಿದ್ದರೆ ಅದಕ್ಕೆ ನೋಟಿಸ್​ ಕೊಟ್ಟು ಅವರಾಗಿಯೇ ತೆರವುಗೊಳಿಸಿ ಪಾರ್ಕಿಂಗ್ ಮಾಡಬೇಕಾಗುತ್ತದೆ. ಬೇರೆ ಯಾವುದಾದ್ರೂ ಅಂಗಡಿಗಳನ್ನು ಹಾಕಿದ್ದರೆ ಅಲ್ಲಿ ನಾವು ದಂಡ ಹಾಕುವಂತಿದ್ದರೆ ಹಾಕುತ್ತೇವೆ. ಇಲ್ಲವಾದ್ರೆ ಸಂಪೂರ್ಣವಾಗಿ ನೆಲಸಮ ಮಾಡುವ ಕೆಲಸಕ್ಕೆ ಮುಂದಾಗುತ್ತಿದ್ದೇವೆ" ಎಂದು ಪಾಲಿಕೆ ಆಯುಕ್ತ ಡಾ.ಗೋಪಾಲಕೃಷ್ಣ ಹೇಳಿದ್ದಾರೆ.

ಇದನ್ನೂ ಓದಿ:ಕೊಮ್ಮಘಟ್ಟದಲ್ಲಿ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ, ರಾಷ್ಟ್ರಕ್ಕೆ ಸಮರ್ಪಣೆ ಮಾಡಿದ ಮೋದಿ

ABOUT THE AUTHOR

...view details