ಹುಬ್ಬಳ್ಳಿ:ಕೇಂದ್ರ ಬಜೆಟ್ ಮೇಲೆ ರೈತ ಸಮುದಾಯ ಹಾಗೂ ಸಾರ್ವಜನಿಕರು ದೊಡ್ಡ ಆಶಾಭಾವನೆ ಇಟ್ಟುಕೊಂಡಿದ್ದರು. ಆದರೆ ಕೇಂದ್ರ ಸರ್ಕಾರದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಬಜೆಟ್ ನಿರಾಶಾದಾಯಕ ಬಜೆಟ್ ಆಗಿದೆ ಎಂದು ರೈತ ಮುಖಂಡ ಸಿದ್ದಣ್ಣ ತೇಜಿ ಬೇಸರ ವ್ಯಕ್ತಪಡಿಸಿದ್ದಾರೆ.
ಕೇಂದ್ರದ ಬಜೆಟ್ನಿಂದ ಜನತೆಗೆ ನಿರಾಸೆ : ರೈತ ಮುಖಂಡ ಕಳವಳ
ಕೇಂದ್ರ ಬಜೆಟ್ ಮೇಲೆ ರೈತ ಸಮುದಾಯ ಹಾಗೂ ಸಾರ್ವಜನಿಕರು ದೊಡ್ಡ ಆಶಾಭಾವನೆ ಇಟ್ಟುಕೊಂಡಿದ್ದರು. ಆದರೆ ಕೇಂದ್ರ ಸರ್ಕಾರದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಬಜೆಟ್ ನಿರಾಶಾದಾಯಕ ಬಜೆಟ್ ಆಗಿದೆ ಎಂದು ರೈತ ಮುಖಂಡ ಸಿದ್ದಣ್ಣ ತೇಜಿ ಬೇಸರ ವ್ಯಕ್ತಪಡಿಸಿದ್ದಾರೆ.
ಬಜೆಟ್ ಕುರಿತು ಮಾಧ್ಯಮದ ಜೊತೆ ಮಾತನಾಡಿದ ಅವರು, ದೇಶದ ಜನತೆ 2020-21ರ ಬಜೆಟ್ ಮೇಲೆ ದೊಡ್ಡ ನಿರೀಕ್ಷೆ ಇಟ್ಟುಕೊಂಡಿದ್ದರು. ನೀರಾವರಿ, ಕೃಷಿಗೆ ಹಾಗೂ ನದಿಗಳ ಅಭಿವೃದ್ಧಿಗೆ ಪೂರಕವಾದ ಬಜೆಟ್ ಆಗುತ್ತದೆ ಎಂದುಕೊಂಡಿದ್ದೆವು. ಅಲ್ಲದೇ ಸ್ವಾಮಿನಾಥನ್ ವರದಿ ಜಾರಿ ಮಾಡುವಲ್ಲಿ ಕೇಂದ್ರ ಸರ್ಕಾರ ಗಮನ ಹರಿಸುತ್ತದೆ ಎಂದು ಭಾವಿಸಿದ್ದೆವು. ಆದರೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮಂಡಿಸಿರುವ ಬಜೆಟ್ ಜನತೆಯ ಕನಸಿಗೆ ತಣ್ಣೀರು ಎರಚಿದೆ ಎಂದರು.
ದೇಶದಲ್ಲಿ ಕೋಟ್ಯಾಂತರ ರೈತರಿದ್ದೇವೆ, ಆದರೆ ಇಪ್ಪತ್ತು ಲಕ್ಷ ರೈತರಿಗೆ ಪಂಪ್ ಸೆಟ್ ಯೋಜನೆ ಕೊಡುತ್ತೇವೆ ಎಂದು ಹೇಳಿದ್ದಾರೆ. ಇದು ರೈತರ ಪರ ಎಂದು ತೋರ್ಪಡಿಸುವುದಕ್ಕಾಗಿ ಮಾತ್ರ ಈ ಯೋಜನೆ ಜಾರಿಗೊಳಿಸಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.