ಕರ್ನಾಟಕ

karnataka

ETV Bharat / state

ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಯುವ ಮುಖಂಡನ ಮೇಲೆ ಮಾರಣಾಂತಿಕ ಹಲ್ಲೆ - ಕಾಂಗ್ರೆಸ್ ಯುವ ಮುಖಂಡನ ಮೇಲೆ ಮಾರಣಾಂತಿಕ ಹಲ್ಲೆ

ಕಾಂಗ್ರೆಸ್ ಯುವ ಮುಖಂಡನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಹುಬ್ಬಳ್ಳಿಯ ಸೋನಿಯಾ ಗಾಂಧಿ ನಗರದ ನಿಜಾಮುದ್ದಿನ್ ಪ್ಲಾಟ್​​ನಲ್ಲಿ ನಡೆದಿದೆ.

perpetrators assault on Congress youth leader at Hubli
ತೌಸಿಫ್ ಲಕ್ಕುಂಡಿ-ತೀವ್ರವಾಗಿ ಗಾಯಗೊಂಡಿರುವ ವ್ಯಕ್ತಿ

By

Published : Oct 3, 2022, 1:14 PM IST

ಹುಬ್ಬಳ್ಳಿ: ಮನೆಯ ಮುಂದೆ ನಿಲ್ಲಬೇಡ ಎಂದಿದ್ದಕ್ಕೆ ಕಾಂಗ್ರೆಸ್ ಯುವ ಮುಖಂಡನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಸೋನಿಯಾ ಗಾಂಧಿ ನಗರದ ನಿಜಾಮುದ್ದಿನ್ ಪ್ಲಾಟ್​​​ನಲ್ಲಿ ನಡೆದಿದೆ.

ಕಾಂಗ್ರೆಸ್ ಯುವ ಮುಖಂಡ ತೌಸಿಫ್ ಲಕ್ಕುಂಡಿ ತೀವ್ರವಾಗಿ ಗಾಯಗೊಂಡಿರುವ ವ್ಯಕ್ತಿ. ಇತ್ತೀಚೆಗಷ್ಟೇ ಸೋನಿಯಾ ಗಾಂಧಿ ನಗರದಲ್ಲಿ ಮನೆ ಮಾಡಿದ್ದ ತೌಸಿಫ್ ಮನೆಯ ಬಳಿ ಪದೇ ಪದೆ ಐದಾರು ಜನರೊಂದಿಗೆ ಬಂದು ನಿಲ್ಲುತ್ತಿದ್ದ ಇಸ್ಮಾಯಿಲ್​ ಎಂಬುವರ ನಡುವೆ ವಾಗ್ವಾದ ನಡೆದಿತ್ತು. ಇದನ್ನೇ ಹಗೆ ಸಾಧಿಸಿದ ಇಸ್ಮಾಯಿಲ್ ನಿನ್ನೆ ರಾತ್ರಿ ತೌಸಿಫ್​​ನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ತೌಸಿಫ್ ಲಕ್ಕುಂಡಿ - ಕಾಂಗ್ರೆಸ್ ಯುವ ಮುಖಂಡ

ಘಟನೆಯಲ್ಲಿ ಗಾಯಗೊಂಡ ತೌಸಿಫ್​ ಅವರನ್ನು ಚಿಕಿತ್ಸೆಗಾಗಿ ಕಿಮ್ಸ್​​ಗೆ ದಾಖಲಿಸಲಾಗಿದೆ. ಘಟನೆ ಕುರಿತು ಮಾಹಿತಿ ಪಡೆದ ಹಳೆ ಹುಬ್ಬಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿ ಬಂಧನಕ್ಕೆ ಬಲೆ ಬೀಸಿದ್ದಾರೆ.

ಇದನ್ನೂ ಓದಿ:ಹಲವು ಪ್ರಕರಣಗಳಲ್ಲಿ ಭಾಗಿ: ಕಲಬುರಗಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ ಶಿವಮೊಗ್ಗಕ್ಕೆ ಗಡಿಪಾರು

ABOUT THE AUTHOR

...view details