ಹುಬ್ಬಳ್ಳಿ:ಮಾಂಸದ ಅಂಗಡಿಯಲ್ಲೇ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ಇಲ್ಲಿನ ಬಾಣತಿಕಟ್ಟೆಯ ಮೆಹಬೂಬ್ನಗರದಲ್ಲಿ ನಡೆದಿದೆ. ಮೃತ ವ್ಯಕ್ತಿಯು ಸವದತ್ತಿ ತಾಲೂಕಿನ ಬೆಳವಾಡಿ ಗ್ರಾಮದ ಅಸ್ಫಾಕ್ ಬೇಪಾರಿ ಎಂದು ಗುರುತಿಸಲಾಗಿದೆ.
ಅಸ್ಫಾಕ್ ಕಳೆದ ರಾತ್ರಿ ಮನೆಯಲ್ಲಿ ಜಗಳ ಮಾಡಿಕೊಂಡು ಹುಬ್ಬಳ್ಳಿಯಲ್ಲಿರುವ ತಮ್ಮ ಸಂಬಂಧಿಕರ ಮನೆಗೆ ಬಂದಿದ್ದ. ಆದರೆ, ಸಂಬಂಧಿಯ ಮಟನ್ ಶಾಪ್ನಲ್ಲಿಯೇ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾನೆ. ಹೊಟ್ಟೆ ಹಾಗೂ ಕುತ್ತಿಗೆಗೆ ಚಾಕು ಹಾಕಿಕೊಂಡು ಮೃತಪಟ್ಟ ರೀತಿಯಲ್ಲಿ ರಕ್ತಸಿಕ್ತವಾಗಿ ಶವ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.