ಕರ್ನಾಟಕ

karnataka

By

Published : Nov 15, 2021, 2:40 PM IST

ETV Bharat / state

ಕ್ರಿಕೆಟ್ ಪಂದ್ಯದ ವೇಳೆ ಆಟಗಾರನಿಗೆ ಗಂಭೀರ ಗಾಯ, ಐಸಿಯುಗೆ ದಾಖಲು..!

ಪ್ರಜ್ವಲ್ ಶಿರೋಳ ಪ್ರಜ್ಞಾಹೀನನಾಗಿ ಮೈದಾನದಲ್ಲಿ ಕುಸಿದು ಬಿದ್ದಿದ್ದ. ತಕ್ಷಣವೇ ಕ್ಲಬ್‌ನ ಸದಸ್ಯರು, ಪಂದ್ಯ ನೋಡುತ್ತಿದ್ದವರು ಮತ್ತು ಕೆಎಸ್‌ಸಿಎ ಸಿಬ್ಬಂದಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಕೆಲ ಸಮಯದಲ್ಲಿಯೇ ಸ್ಕ್ಯಾನಿಂಗ್ ಮಾಡಿದಾಗ ಮೆದುಳಿಗೆ ಬಲವಾಗಿ ಪೆಟ್ಟು ಬಿದ್ದಿದ್ದು ದೃಢಪಟ್ಟಿತ್ತು..

Players injured, Players injured in cricket match, Players injured in cricket match at Hubli, Hubli news, ಆಟಗಾರನಿಗೆ ಗಂಭೀರ ಗಾಯ, ಕ್ರಿಕೆಟ್ ಪಂದ್ಯದ ವೇಳೆ ಆಟಗಾರನಿಗೆ ಗಂಭೀರ ಗಾಯ, ಹುಬ್ಬಳ್ಳಿಯಲ್ಲಿ ಕ್ರಿಕೆಟ್ ಪಂದ್ಯದ ವೇಳೆ ಆಟಗಾರನಿಗೆ ಗಂಭೀರ ಗಾಯ, ಹುಬ್ಬಳ್ಳಿ ಸುದ್ದಿ,
ಕ್ರಿಕೆಟ್ ಪಂದ್ಯದ ವೇಳೆ ಆಟಗಾರನಿಗೆ ಗಂಭೀರ ಗಾಯ

ಹುಬ್ಬಳ್ಳಿ :ಇಲ್ಲಿನರಾಜನಗರದ ಮೈದಾನದಲ್ಲಿ ನಡೆಯುತ್ತಿರುವ ಮೊದಲ ಡಿವಿಷನ್ ಕ್ರಿಕೆಟ್ ಟೂರ್ನಿಯ ಪಂದ್ಯದ ವೇಳೆ ಫೀಲ್ಡಿಂಗ್ ಮಾಡುವಾಗ ಇಬ್ಬರು ಆಟಗಾರರು ಪರಸ್ಪರ ಡಿಕ್ಕಿ ಹೊಡೆದುಕೊಂಡು ಪರಿಣಾಮ ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಹುಬ್ಬಳ್ಳಿಯ ಕ್ರಿಕೆಟ್ ಅಕಾಡೆಮಿ ಎ ಹಾಗೂ ಧಾರವಾಡದ ಎಸ್‌ಡಿಎಂ ಬಿ ತಂಡಗಳ ನಡುವೆ ನಡೆದ ಪಂದ್ಯದವೇಳೆ ಈ ಘಟನೆ ನಡೆದಿದೆ. 19ನೇ ಓವರ್‌ನಲ್ಲಿ ಫೀಲ್ಡಿಂಗ್ ಮಾಡುವಾಗ ಕವರ್ಸ್ ಹಾಗೂ ಪಾಯಿಂಟ್ ಕ್ಷೇತ್ರದ ನಡುವೆ ಎಸ್‌ಡಿಎಂ ಬಿ ತಂಡದ ಪ್ರಜ್ವಲ್ ಶಿರೋಳ ಮತ್ತು ಪ್ರಜ್ವಲ್ ಬೋರಣ್ಣನವರ ಪರಸ್ಪರ ಡಿಕ್ಕಿ ಹೊಡೆದುಕೊಂಡಿದ್ದಾರೆ.

ಕ್ರಿಕೆಟ್ ಪಂದ್ಯದ ವೇಳೆ ಆಟಗಾರನಿಗೆ ಗಂಭೀರ ಗಾಯ

ಪ್ರಜ್ವಲ್ ಶಿರೋಳ ಪ್ರಜ್ಞಾಹೀನನಾಗಿ ಮೈದಾನದಲ್ಲಿ ಕುಸಿದು ಬಿದ್ದಿದ್ದ. ತಕ್ಷಣವೇ ಕ್ಲಬ್‌ನ ಸದಸ್ಯರು, ಪಂದ್ಯ ನೋಡುತ್ತಿದ್ದವರು ಮತ್ತು ಕೆಎಸ್‌ಸಿಎ ಸಿಬ್ಬಂದಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಕೆಲ ಸಮಯದಲ್ಲಿಯೇ ಸ್ಕ್ಯಾನಿಂಗ್ ಮಾಡಿದಾಗ ಮೆದುಳಿಗೆ ಬಲವಾಗಿ ಪೆಟ್ಟು ಬಿದ್ದಿದ್ದು ದೃಢಪಟ್ಟಿತ್ತು.

ಹೀಗಾಗಿ, ತಕ್ಷಣವೇ ಶಸ್ತ್ರ ಚಿಕಿತ್ಸೆ ಮಾಡಬೇಕು ಎಂದು ವೈದ್ಯರು ಹೇಳಿದ್ದರು. ಪೋಷಕರಿಗೆ ವಿಷಯ ತಿಳಿಸಿ ಒಂದೂವರೆ ಗಂಟೆಗಳ ಕಾಲ ವೈದ್ಯರು ಶಸ್ತ್ರಚಿಕಿತ್ಸೆ ಮಾಡಿದ್ದಾರೆ. ಪ್ರಜ್ವಲ್ ಚೇತರಿಸಿಕೊಳ್ಳುತ್ತಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ.

ಚಿಕಿತ್ಸೆ ಖರ್ಚು ಭರಿಸಲಿರುವ ಕೆಎಸ್‌ಸಿಎ :ಗಾಯಗೊಂಡಿರುವ ಪ್ರಜ್ವಲ್ ಶಿರೋಳ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ಭರಿಸಲಿದೆ. ಶನಿವಾರ ಸಂಜೆ ಪ್ರಜ್ವಲ್ ಶಿರೋಳಗೆ ಪ್ರಜ್ಞೆ ಬಂದಿದೆ.

ಮಂಗಳವಾರದ ತನಕ ಐಸಿಯುನಲ್ಲಿಯೇ ಇಡಬೇಕು ಎಂದು ವೈದ್ಯರು ತಿಳಿಸಿದ್ದಾರೆ. ಆತನ ಪೋಷಕರು ಚಿಂತಿಸಬೇಕಿಲ್ಲ. ನಮ್ಮ ಸಂಸ್ಥೆ ಆಟಗಾರನ ಪರ ಇರಲಿದೆ. ಸಂಪೂರ್ಣ ಖರ್ಚು ನೋಡಿಕೊಳ್ಳಲಿದೆ ಎಂದು ಕೆಎಸ್‌ಸಿಎ ಧಾರವಾಡ ವಲಯದ ನಿಮಂತ್ರಕ ಅವಿನಾಶ ಪೋತದಾರ ತಿಳಿಸಿದ್ದಾರೆ.

ABOUT THE AUTHOR

...view details