ಹುಬ್ಬಳ್ಳಿ:ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಪೊಲೀಸರು ವಾಹನಗಳ ದಾಖಲೆಗಳನ್ನು ಪರೀಕ್ಷಿಸುತ್ತಿದ್ದು, ದಾಖಲೆಗಳು ಸರಿಯಿದ್ದರೂ ವಾಹನ ಸವಾರರ ಮೇಲೆ ದೌರ್ಜನ್ಯ ನಡೆಸುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ದಾಖಲೆಗಳು ಸರಿಯಿದ್ರೂ ಸವಾರರ ಮೇಲೆ ದೌರ್ಜನ್ಯ: ಪೊಲೀಸರ ವಿರುದ್ಧ ಆರೋಪ - undefined
ರಾಷ್ಟ್ರೀಯ ಹೆದ್ದಾರಿ 4ರ ಪುಣೆ- ಬೆಂಗಳೂರು ರಸ್ತೆಯಲ್ಲಿ ಪೊಲೀಸರು ವಾಹನಗಳ ದಾಖಲೆಗಳನ್ನು ಪರಿಶೀಲಿಸುತ್ತಿದ್ದು, ಎಲ್ಲಾ ಡಕ್ಯೂಮೆಂಟ್ಗಳು ಸರಿಯಿದ್ದರು ಕೂಡ ಪೊಲೀಸರು ದಂಡ ವಿಧಸಿ ದೌರ್ಜನ್ಯ ಮಾಡುತ್ತಿದ್ದಾರೆ ಎಂಬ ಆರೋಪವೊಂದು ಕೇಳಿ ಬಂದಿದೆ.
ರಾಷ್ಟ್ರೀಯ ಹೆದ್ದಾರಿ 4ರ ಪುಣೆ- ಬೆಂಗಳೂರು ರಸ್ತೆಯಲ್ಲಿ ಪೊಲೀಸರು ವಾಹನಗಳ ದಾಖಲೆಗಳನ್ನು ಪರಿಶೀಲಿಸುತ್ತಿದ್ದು, ಈ ವೇಳೆ ಮಹಾರಾಷ್ಟ್ರದಿಂದ ಬಂದಂತಹ ವಾಹನವನ್ನು ಪೊಲೀಸರು ತಪಾಸಣೆ ನಡೆಸುವಾಗ ವಾಹನದ ಚಾಲಕ ಸರಿಯಾದ ದಾಖಲೆಗಳನ್ನು ತೋರಿಸಿದ್ದಾರೆ. ಆದರೂ ಪೊಲೀಸರು ಅವರಿಂದ ಎರಡು ಸಾವಿರ ರೂಪಾಯಿ ಹಣ ಪಡೆದು, ನಮ್ಮ ಮೇಲೆಯೇ ದೌರ್ಜನ್ಯ ಎಸಗುತ್ತಿದ್ದಾರೆ ಎಂದು ವಾಹನ ಚಾಲಕ ಗಂಭೀರವಾಗಿ ಆರೋಪಿಸಿದ್ದಾರೆ.
ನಾವು ಕಳ್ಳರಲ್ಲ. ನಮ್ಮ ದಾಖಲೆಗಳು ಸರಿಯಾಗಿಲ್ಲವಾದರೆ ದಂಡ ಕಟ್ಟಿಸಿಕೊಳ್ಳಲಿ. ಅದನ್ನು ಬಿಟ್ಟು ಅನಗತ್ಯವಾಗಿ ಹಣ ಸುಲಿಗೆ ಮಾಡುತ್ತಿದ್ದಾರೆ ಎಂದು ಚಾಲಕ ದೂರಿದ್ದು, ಇದನ್ನು ವಿಡಿಯೋ ಮಾಡಿ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.