ಹುಬ್ಬಳ್ಳಿ : ಹುಬ್ಬಳ್ಳಿ-ಧಾರವಾಡ ಮಹಾನಗರದಲ್ಲಿ ರೌಡಿ ಶೀಟರುಗಳ ಮನೆಗಳ ಮೇಲೆ ಪೊಲೀಸ್ ದಾಳಿ ನಡೆದಿದೆ. ಬೆಳ್ಳಂಬೆಳಗ್ಗೆ ಅವಳಿ ನಗರದ 21 ರೌಡಿಶೀಟರುಗಳ ಮನೆಗಳಲ್ಲಿ ಶೋಧ ನಡೆಸಿದ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
ಹುಬ್ಬಳ್ಳಿ ಧಾರವಾಡದಲ್ಲಿ ಅಪರಾಧ ಹೆಚ್ಚಳ: ರೌಡಿಶೀಟರುಗಳ ಮನೆಗಳ ಮೇಲೆ ದಾಳಿ, ಎಚ್ಚರಿಕೆ - latest news of hubli dharwad
ಕಳೆದ ಹಲವು ದಿನಗಳಿಂದ ನಡೆದ ಚಾಕು ಇರಿತ ಹಾಗೂ ಶೂಟೌಟ್ ಪ್ರಕರಣಗಳಿಂದ ಬೇಸತ್ತಿರುವ ಹುಬ್ಬಳ್ಳಿ-ಧಾರವಾಡ ಮಹಾನಗರ ಪೊಲೀಸರು ಇಂದು ಮುಂಜಾನೆ ರೌಡಿಶೀಟರ್ಗಳ ಮನೆಗಳ ಮೇಲೆ ದಾಳಿ ನಡೆಸಿ ಬಿಸಿ ಮುಟ್ಟಿಸಿದ್ದಾರೆ.
ಕಳೆದ ಹಲವು ದಿನಗಳಿಂದ ನಡೆದ ಚಾಕು ಇರಿತ ಹಾಗೂ ಶೂಟೌಟ್ ಪ್ರಕರಣಗಳ ಹಿನ್ನೆಲೆಯಲ್ಲಿ ಪೊಲೀಸರು ರೌಡಿಶೀಟರ್ಗಳಿಗೆ ಬೆಳ್ಳಂಬೆಳಗ್ಗೆ ಬಿಸಿ ಮುಟ್ಟಿಸಿದ್ದಾರೆ. ಹು-ಧಾ ಮಹಾನಗರ ಪೊಲೀಸ್ ಆಯುಕ್ತ ಆರ್. ದಿಲೀಪ್ ಮಾರ್ಗದರ್ಶನದಲ್ಲಿ ಉಪ ಪೊಲೀಸ್ ಆಯುಕ್ತ ಡಿ. ಎಲ್. ನಾಗೇಶ, ಸಹಾಯಕ ಪೊಲೀಸ್ ಆಯುಕ್ತರಾದ ಎಸ್.ಎಂ.ಸಂದಿಗವಾಡ ನೇತೃತ್ವದಲ್ಲಿ ನಗರದ ರೌಡಿಶೀಟರ್ ಮನೆಗಳ ಮೇಲೆ ದಾಳಿ ಮಾಡಿ ಒಟ್ಟು 4 ರೌಡಿಗಳ ಮೇಲೆ ಮುಂಜಾಗ್ರತಾ ಕ್ರಮವಾಗಿ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ.
ಧಾರವಾಡ ಉಪ ವಿಭಾಗದ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಉಪ ಪೊಲೀಸ್ ಆಯುಕ್ತರಾದ ಡಾ. ಶಿವಕುಮಾರ ಗುಣಾರೆ ಮಾರ್ಗದರ್ಶನದಲ್ಲಿ ಎಸಿಪಿ ಎಂ. ಎನ್. ರುದ್ರಪ್ಪ ನೇತೃತ್ವದಲ್ಲಿ ಸಿಬ್ಬಂದಿಯೊಂದಿಗೆ ಒಟ್ಟು 4 ರೌಡಿ ಶೀಟರ್ ಮನೆಗಳ ಮೇಲೆ ದಾಳಿ ಮಾಡಿದ್ದಾರೆ.