ಕರ್ನಾಟಕ

karnataka

ETV Bharat / state

ಶಾಂತತೆಯಿಂದ ಗಣೇಶ ಚತುರ್ಥಿ ಆಚರಣೆ ಮಾಡಿ: ಪೊಲೀಸ್ ಕಮಿಷನರ್ ಲಾಬೂರಾಮ್ ಸೂಚನೆ - hubli dharwead news

ಅವಳಿನಗರದಲ್ಲಿ ಶಾಂತತೆಯಿಂದ ಗಣೇಶ ಚತುರ್ಥಿ ಆಚರಣೆಗೆ ಸೂಚನೆ ನೀಡಲಾಗಿದ್ದು, ಅದಕ್ಕಾಗಿ ಎಲ್ಲ ವಿಭಾಗದ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ ಎಂದು ಪೊಲೀಸ್ ಕಮಿಷನರ್ ಲಾಬೂರಾಮ್ ಸೂಚನೆ ನೀಡಿದರು.

Police Commissioner LaBooram's notice to people over ganesh fest
ಶಾಂತತೆಯಿಂದ ಗಣೇಶ ಚತುರ್ಥಿ ಆಚರಣೆ ಮಾಡಿ: ಪೊಲೀಸ್ ಕಮಿಷನರ್ ಲಾಬೂರಾಮ್ ಸೂಚನೆ

By

Published : Sep 10, 2021, 2:45 AM IST

ಹುಬ್ಬಳ್ಳಿ: ಗಣೇಶ ಚತುರ್ಥಿ ಹಿನ್ನೆಲೆ ‌ನಗರದಲ್ಲಿ ಸೂಕ್ತ ಬಂದೋಬಸ್ತ್​ ಕೈಗೊಳ್ಳಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ ಎಂದು ಹು-ಧಾ ಪೊಲೀಸ್ ಆಯುಕ್ತ ಲಾಬೂರಾಮ್ ಹೇಳಿದರು.

ಗಣೇಶ ಮಂಡಳಿ ಸದಸ್ಯರೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಅವಳಿನಗರದಲ್ಲಿ ಶಾಂತತೆಯಿಂದ ಗಣೇಶ ಚತುರ್ಥಿ ಆಚರಣೆಗೆ ಸೂಚನೆ ನೀಡಲಾಗಿದ್ದು, ಅದಕ್ಕಾಗಿ ಎಲ್ಲ ವಿಭಾಗದ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ. ಅವಳಿನಗರದಲ್ಲಿ ಸೂಕ್ತವಾದ ಬಂದೋಬಸ್ತ್​ ನಿಯೋಜನೆ ಮಾಡಲಾಗಿದೆ ಎಂದು ವಿವರಿಸಿದರು.

ಪೊಲೀಸ್ ಕಮಿಷನರ್ ಲಾಬೂರಾಮ್

ಕೆಎಸ್​ಆರ್​ಪಿ, ಸಿಎಆರ್, ಹೋಂ ಗಾರ್ಡ್ಸ್ ಸೇರಿದಂತೆ ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಲಾಗುತ್ತಿದೆ. ಗಣೇಶ ಮಂಡಳಿಗಳು ಕೊವಿಡ್ ನಿಯಮ ಪಾಲಿಸಲು ‌ಕಟ್ಟುನಿಟ್ಟಿನ‌ ಸೂಚನೆ ನೀಡಲಾಗಿದೆ. ಈ ವರ್ಷವೂ ಗಣೇಶ ಮೆರವಣಿಗೆಗೆ ಅವಕಾಶ ನಿರಾಕರಣೆ ಮಾಡಲಾಗಿದ್ದು, ಕೇವಲ 20 ಜನರು ಮಾತ್ರ ಗಣೇಶ ವಿಸರ್ಜನೆಯಲ್ಲಿ ಪಾಲ್ಗೊಳ್ಳಲು ಸೂಚನೆ ನೀಡಲಾಗಿದೆ ಎಂದರು.

ABOUT THE AUTHOR

...view details