ಕರ್ನಾಟಕ

karnataka

By

Published : Sep 9, 2020, 10:44 PM IST

ETV Bharat / state

ಹು-ಧಾ ಅವಳಿನಗರದಲ್ಲಿ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಪೊಲೀಸ್ ಇಲಾಖೆ ಹದ್ದಿನ ಕಣ್ಣು

ನಗರದ ಪೊಲೀಸ್ ಕಮೀಷನರ್ ಕಚೇರಿಯಲ್ಲಿ ಅಕ್ರಮ ಚಟುವಟಿಕೆಗಳ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಲಾಯಿತು.

Police meeting
ಪೊಲೀಸ್ ಕಮೀಷನರ್ ಸಭೆ

ಹುಬ್ಬಳ್ಳಿ:ಹು-ಧಾ ಮಹಾನಗರದಲ್ಲಿ ನಡೆಯುತ್ತಿರುವ ಅಕ್ರಮ ಗಾಂಜಾ ಹಾಗೂ ಇನ್ನಿತರ ಅಕ್ರಮ ಚಟುವಟಿಕೆಗಳ ಬಗ್ಗೆ ಹೆಚ್ಚಿನ ನಿಗಾವಹಿಸಿ ಸೂಕ್ತ ಕಾರ್ಯಾಚರಣೆ ಮೂಲಕ ಕಾನೂನು ಕ್ರಮಗಳನ್ನು ಜರುಗಿಸಲಾಗುವುದು ಎಂದು ಹು-ಧಾ ಮಹಾನಗರ ಪೊಲೀಸ್ ಆಯುಕ್ತ ಆರ್.ದಿಲೀಪ್ ಹೇಳಿದರು.

ನಗರದ ಪೊಲೀಸ್ ಕಮೀಷನರ್ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಸಭೆಯಲ್ಲಿ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಹು-ಧಾ ಅವಳಿನಗರದ ಅಕ್ರಮ ಚಟುವಟಿಕೆಗಳ ಕುರಿತು ಹದ್ದಿನ ಕಣ್ಣು ಇಡುವಂತೆ ಸೂಕ್ತ ಸಲಹೆ ನೀಡಿದರು.

ಇನ್ನೂ ಪ್ರಿನ್ಸಿಪಲ್ ಪಬ್ಲಿಕ್ ಪ್ರಾಸಿಕ್ಯೂಟರ್ ಡಿ.ಎ.ಭಂಡೇಕರ ಅವಳಿನಗರದ ಅಕ್ರಮ ಚಟುವಟಿಕೆಗಳ ವಿರುದ್ಧದ ಕಾರ್ಯಾಚರಣೆ ಮತ್ತಷ್ಟು ಚುರುಕುಗೊಳಿಸುವ ಬಗ್ಗೆ ಸಲಹೆ ನೀಡಿದರು. ಇದೇ ವೇಳೆ ಪೊಲೀಸ್ ಆಯುಕ್ತರು ಭಂಡೇಕರ ಅವರಿಗೆ ಅಭಿನಂದನೆ ಸಲ್ಲಿಸಿದರು.

ABOUT THE AUTHOR

...view details