ಹುಬ್ಬಳ್ಳಿ:ಹೊಸ ವರ್ಷದ ಆಚರಣೆ ಹೆಸರಲ್ಲಿ ಅನೈತಿಕ ವರ್ತನೆ ಕಂಡು ಬಂದರೆ ಅಂತಹವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಹು-ಧಾ ಮಹಾನಗರ ಪೊಲೀಸ್ ಆಯುಕ್ತ ಆರ್.ದಿಲೀಪ್ ಎಚ್ಚರಿಕೆ ನೀಡಿದ್ದಾರೆ.
ಈ ಬಗ್ಗೆ ಈಟಿವಿ ಭಾರತ ಜೊತೆ ಮಾತನಾಡಿದ ಅವರು, ಹೊಸ ವರ್ಷವನ್ನು ಸಂತೋಷದಿಂದ ಆಚರಣೆ ಮಾಡುವ ಮೂಲಕ ಯಾವುದೇ ಅವಘಡಗಳು ಸಂಭವಿಸಿದಂತೆ ಸಾರ್ವಜನಿಕರು ಎಚ್ಚರಿಕೆ ವಹಿಸಬೇಕು ಎಂದರು.ಯಾವುದೇ ಸಂಘಟನೆಗಳ ಹೆಸರಲ್ಲಿ ಹೋಗಿ ಸಾರ್ವಜನಿಕ ಸ್ವಾತಂತ್ರ್ಯಕ್ಕೆ ಧಕ್ಕೆ ಉಂಟು ಮಾಡಿದರೆ ಅಂತವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ರು.
ಪೊಲೀಸ್ ಆಯುಕ್ತರ ಎಚ್ಚರಿಕೆ ಈಗಾಗಲೇ ಹು-ಧಾ ಮಹಾನಗರದ ಎಲ್ಲಾ ಹೋಟೆಲ್ ಹಾಗೂ ರೆಸ್ಟೋರೆಂಟ್ಗಳಿಗೂ ಮಾಹಿತಿ ನೀಡಲಾಗಿದ್ದು, ಬೌನ್ಸರ್ ಹಾಗೂ ನೈಟ್ ವಿಷನ್ ಸಿಸಿ ಕ್ಯಾಮರಾಗಳನ್ನು ಅಳವಡಿಸಬೇಕು ಎಂದು ಸೂಚಿಸಲಾಗಿದೆ. ಗಾಂಜಾ ಅಫೀಮು ಹಾಗೂ ಇತರ ಕಾನೂನು ಬಾಹಿರ ಮಾಧಕ ಸೇವನೆಗಳಿಗೆ ಅವಕಾಶ ನೀಡಿದರೆ ಅಂತಹ ಹೊಟೇಲ್ ಹಾಗೂ ರೆಸ್ಟೋರೆಂಟ್ ವಿರುದ್ಧ ಸೂಕ್ತ ಕ್ರಮ ಜರುಗಿಸಲಾಗುವುದು. ಯಾವುದೇ ವೇಳೆ ಅವಘಡ ಸಂಭವಿಸಿದರು ಕೂಡ ಪೊಲೀಸ್ ಇಲಾಖೆಗೆ ಮಾಹಿತಿ ನೀಡಬೇಕು. ಒಂದು ವೇಳೆ ಹೋಟೆಲ್ ಹಾಗೂ ರೆಸ್ಟೋರೆಂಟ್ ಮರ್ಯಾದೆಯ ಹಿನ್ನೆಲೆ ಘಟನೆಯನ್ನು ಮರೆಮಾಚಲು ಪ್ರಯತ್ನಿಸಬಾರದು ಎಂದು ಸೂಚನೆ ನೀಡಿದರು.
ಹೊಸವರ್ಷ ಹರ್ಷದಿಂದ ಕೂಡಿರಲಿ ಅದನ್ನು ಬಿಟ್ಟು ಕುಡಿದ ಮತ್ತಿನಲ್ಲಿ ಡ್ರಿಂಕ್ ಆ್ಯಂಡ್ ಡ್ರೈವ್ ಮಾಡಬೇಡಿ.ಅಲ್ಲದೇ ಪೊಲೀಸ್ ಚಕ್ಕಿಂಗ್ ಮಾಡಲಾಗುತ್ತಿದ್ದು,ಯಾವುದೇ ಸಾರ್ವಜನಿಕರು ಪೊಲೀಸ್ ಸಿಬ್ಬಂದಿಯೊಂದಿಗೆ ಅನುಚಿತವಾಗಿ ವರ್ತಿಸಬೇಡಿ ಎಂದು ಸಲಹೆ ನೀಡಿದರು. ಬಾರ್ ಆ್ಯಂಡ್ ರೆಸ್ಟೋರೆಂಟ್ಗಳು ಸ್ಪೇರ್ ಆ್ಯಂಡ್ ಕ್ಯಾಬ್ ವ್ಯವಸ್ಥೆ ಮಾಡುವ ಮೂಲಕ ಕುಡಿದ ಅಮಲಿನಲ್ಲಿರುವ ಗ್ರಾಹಕರನ್ನು ಮನೆಗೆ ಕಳಿಸುವ ಕಾರ್ಯ ಮಾಡಬೇಕು. ಒಂದು ವೇಳೆ ಸಾಧ್ಯವಾಗದ ಹಿನ್ನೆಲೆ ಪೊಲೀಸರ ಗಮನಕ್ಕೆ ತರಬೇಕು ಎಂದ ಅವರು, ಹೊಸ ವರ್ಷದ ಆಚರಣೆಯನ್ನು ಸಂತೋಷದಿಂದ ಹಾಗೂ ಶಾಂತಿ ಸುವ್ಯವಸ್ಥೆಯಿಂದ ಆಚರಿಸಬೇಕು ಎಂದು ಹೇಳಿದರು.