ಕರ್ನಾಟಕ

karnataka

ETV Bharat / state

ದೇಶ ವಿರೋಧಿ ಚಟುವಟಿಕೆ ನಡೆಸುವವರ ಮೇಲೆ ಪೊಲೀಸ್ ಇಲಾಖೆ‌ ನಿಗಾ: ಸಿಎಂ - CM basavaraj bommai in hubballi

ಸಾರ್ವಜನಿಕ ಗಣೇಶೋತ್ಸವಕ್ಕೆ ಅವಕಾಶ ನೀಡುವ ಬಗ್ಗೆ ಚರ್ಚೆ ನಡೆಯುತ್ತಿದೆ. ಕೋವಿಡ್ ಪರಿಸ್ಥಿತಿ ನೋಡಿಕೊಂಡು‌ ನಿರ್ಧಾರ ತೆಗೆದುಕೊಳ್ಳಲಾಗುವುದು. ಜಿಲ್ಲಾವಾರು ಕೋವಿಡ್ ಪರಿಸ್ಥಿತಿ ನೋಡಿಕೊಂಡು ತಜ್ಞರಿಗೆ ವರದಿ‌ ನೀಡಲು ಕೇಳಿದ್ದೇವೆ. ಸೆಪ್ಟೆಂಬರ್ 5ರಂದು ಸೂಕ್ತ ನಿರ್ಧಾರ ಪ್ರಕಟಿಸಿಲಾಗುವುದು ಎಂದು ಭರವಸೆ ನೀಡಿದರು.

police-department-tracking-down-anti-national-activities-cm
ದೇಶವಿರೋಧಿ ಚಟುವಟಿಕೆ ಎಸಗುವವರ ಮೇಲೆ ಪೊಲೀಸ್ ಇಲಾಖೆ‌ ನಿಗಾ: ಸಿಎಂ

By

Published : Sep 1, 2021, 10:17 AM IST

Updated : Sep 1, 2021, 10:48 AM IST

ಹುಬ್ಬಳ್ಳಿ:ದೇಶದ ವಿರುದ್ಧ ಚಟುವಟಿಕೆ ನಡೆಸುವವರ ಮೇಲೆ ಪೊಲೀಸ್ ಇಲಾಖೆ‌ ನಿಗಾ ಇಟ್ಟಿದೆ. ಉಗ್ರರ ಜೊತೆ ಕೈ ಜೋಡಿಸಿ, ಸಹಾಯಕರಾಗಿ ಕೆಲಸ ಮಾಡುವವರ ಮೇಲೆ‌ ನಿಗಾ ವಹಿಸಲಾಗುತ್ತಿದೆ‌ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ನಗರದ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈಗಾಗಲೇ ಎನ್ಐಎ ಕೆಲವರನ್ನು ಬಂಧನ ಮಾಡಿದೆ‌.‌ ಎನ್‌ಐಎ ಜೊತೆ ನಮ್ಮ ಪೊಲೀಸರು ಸೇರಿಕೊಂಡ ಕೆಲಸ ಮಾಡುತ್ತಿದ್ದಾರೆ ಎಂದರು.

ನಾಳೆ ಕೇಂದ್ರ ಗೃಹ ಸಚಿವರ ಭೇಟಿ:

ನಾಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ, ಸೇರಿದಂತೆ ಹಲವಾರು ಕೇಂದ್ರ ಸಚಿವರು ಹುಬ್ಬಳ್ಳಿಗೆ ಆಗಮಿಸುತ್ತಿದ್ದಾರೆ. ಬಳಿಕ ದಾವಣಗೆರೆಗೆ ಶಾ ಭೇಟಿ ನೀಡಲಿದ್ದಾರೆ. ಅಮಿತ್ ಶಾ ಜೊತೆ ರಾಜ್ಯದ ಹಲವಾರು ಅಭಿವೃದ್ಧಿ ವಿಚಾರಗಳ ಬಗ್ಗೆ ಚರ್ಚೆಯಾಗಲಿದೆ ಎಂದು ಸಿಎಂ ತಿಳಿಸಿದರು.

ಸಾರ್ವಜನಿಕ ಗಣೇಶೋತ್ಸವಕ್ಕೆ ಅವಕಾಶ ನೀಡುವ ಬಗ್ಗೆ ಚರ್ಚೆ ನಡೆಯುತ್ತಿದೆ. ಕೋವಿಡ್ ಪರಿಸ್ಥಿತಿ ನೋಡಿಕೊಂಡು‌ ನಿರ್ಧಾರ ತೆಗೆದುಕೊಳ್ಳಲಾಗುವುದು. ಜಿಲ್ಲಾವಾರು ಕೋವಿಡ್ ಪರಿಸ್ಥಿತಿ ನೋಡಿಕೊಂಡು ತಜ್ಞರಿಗೆ ವರದಿ‌ ನೀಡಲು ಕೇಳಿದ್ದೇವೆ. ಸೆಪ್ಟೆಂಬರ್ 5ರಂದು ಸೂಕ್ತ ನಿರ್ಧಾರ ಪ್ರಕಟಿಸಲಾಗುವುದು ಎಂದು ಭರವಸೆ ನೀಡಿದರು.

ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ

ಪಾಲಿಕೆ ಚುನಾವಣೆ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಮೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ. ಹುಬ್ಬಳ್ಳಿ ಧಾರವಾಡ ಅಭಿವೃದ್ಧಿಗೆ ವಿಶೇಷ ಯೋಜನೆ ರೂಪಿಸಲಾಗುತ್ತಿದೆ. ಪಾಲಿಕೆ‌ ಚುನಾವಣೆಯಲ್ಲಿ ಬಿಜೆಪಿ‌ ಬೆಂಬಲಿಸುವಂತೆ ಸಿಎಂ ಮನವಿ ಮಾಡಿದರು.

ಈಗಾಗಲೇ ನಾವು ವೀಕೆಂಡ್ ಕರ್ಪ್ಯೂ ತೆಗೆದಿದ್ದೇವೆ. ಕೋವಿಡ್ ಪರಿಸ್ಥಿತಿ ನೋಡಿಕೊಂಡ ನೈಟ್ ಕರ್ಪ್ಯೂ ತೆಗೆಯುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ. ಆರ್ಥಿಕ ಚಟುವಟಿಕೆ ಮೇಲೆ ನಿರ್ಬಂಧ ಹಾಕುವ ಉದ್ದೇಶ ಸರ್ಕಾರಕ್ಕಿಲ್ಲ. ಕೋವಿಡ್ ನಿರ್ವಹಣೆಯೂ ನಮಗೆ ಅಷ್ಟೇ ಮುಖ್ಯ. ಕೋವಿಡ್ ನಿಯಂತ್ರಣದಲ್ಲಿರುವ ಜಿಲ್ಲೆಗಳಲ್ಲಿ ನೈಟ್ ಕರ್ಪ್ಯೂ ಸಡಿಲಿಕೆ ಬಗ್ಗೆ ಮುಂದಿನ ದಿನದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.

ಇದನ್ನೂ ಓದಿ:ಪ್ರಯಾಣಿಕನ ಜೊತೆಗೆ ಕೋಳಿಗೂ ಟಿಕೆಟ್​​ ನೀಡಿದ ನಿರ್ವಾಹಕ..!

Last Updated : Sep 1, 2021, 10:48 AM IST

For All Latest Updates

ABOUT THE AUTHOR

...view details