ಹುಬ್ಬಳ್ಳಿ:ಹುಬ್ಬಳ್ಳಿಯ ರೈಲು ನಿಲ್ದಾಣದಲ್ಲಿ ಸ್ಫೋಟಕ ಪತ್ತೆಯಾದ ಹಿನ್ನೆಲೆ ರೈಲು ನಿಲ್ದಾಣದಲ್ಲಿ ಪೊಲೀಸರು ಭಾರಿ ಕಟ್ಟೆಚ್ಚರ ವಹಿಸಿದ್ದಾರೆ.
ರೈಲು ನಿಲ್ದಾಣದಲ್ಲಿ ಸ್ಫೋಟಕ ಪತ್ತೆ ಪ್ರಕರಣ... ಹುಬ್ಬಳ್ಳಿಯಲ್ಲಿ ಪೊಲೀಸರಿಂದ ಕಟ್ಟೆಚ್ಚರ - ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ಸ್ಫೋಟ ಲೇಟೆಸ್ಟ್ ನ್ಯೂಸ್
ಹುಬ್ಬಳ್ಳಿಯ ರೈಲು ನಿಲ್ದಾಣದಲ್ಲಿ ಸ್ಫೋಟಕ ಪತ್ತೆ ಹಿನ್ನೆಲೆ ಪೊಲೀಸರು ತೀವ್ರ ಕಟ್ಟೆಚ್ಚರ ವಹಿಸಿದ್ದಾರೆ.
ನಗರದ ರೈಲ್ವೆ ನಿಲ್ದಾಣದಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬ್ ನಿಷ್ಕ್ರಿಯದಳ ಅನುಮಾನಾಸ್ಪದ ಬಾಕ್ಸ್ ಗಳನ್ನು ರೈಲ್ವೆ ನಿಲ್ದಾಣದ ಹೊರಗೆ ಇರಿಸಿದೆ. ಈ ಹಿನ್ನೆಲೆ ರೈಲು ನಿಲ್ದಾಣದ ಬಳಿ ಕಟ್ಟೆಚ್ಚರ ವಹಿಸಿದ್ದು, ಸ್ಥಳದಲ್ಲಿ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ.ಮರಳಿನ ಚೀಲಗಳ ರಾಶಿಯಲ್ಲಿ ಹತ್ತಕ್ಕು ಹೆಚ್ಚು ಬಾಕ್ಸ್ ಗಳನ್ನ ಇಡಲಾಗಿದ್ದು, ಅವುಗಳನ್ನು ಎಸ್ಪಿ ಬೋರಲಿಂಗಯ್ಯ ಅವರನ್ನೊಳಗೊಂಡ ತಂಡ ತನಿಖೆ ನಡೆಸಲಿದೆ. ಇನ್ನು ರೈಲು ನಿಲ್ದಾಣದಲ್ಲಿ ಪ್ರಯಾಣಿಕರ ಓಡಾಟ ಎಂದಿನಂತಿದೆ.
ಇನ್ನು ರೈಲ್ವೆ ನಿಲ್ದಾಣದಲ್ಲಿ ಸ್ಫೋಟ ಪ್ರಕರಣದಿಂದ ನಗರದ ಜನನಿಬಿಡ ಪ್ರದೇಶ ಹಾಗೂ ಸೂಕ್ಷ್ಮ ಪ್ರದೇಶಗಳಲ್ಲಿ ಕೂಡ ಕಟ್ಟೆಚ್ಚರ ವಹುಸಲಾಗಿದೆ.ನಗರದ ವಿಮಾನ ನಿಲ್ದಾಣದಲ್ಲಿ ಪೊಲೀಸ್ ಕಣ್ಗಾವಲು ವಹಿಸಲಾಗಿದೆ. ವಿಮಾನ ನಿಲ್ದಾಣ ಒಳಪ್ರವೇಶಿಸುವ ಹಾಗೂ ವ್ಯಕ್ತಿಗಳು ವಾಹನಗಳನ್ನುಶ್ವಾನದಳದಿಂದ ಹಾಗೂ ಮೆಟಲ್ ಡಿಟೆಕ್ಟರ್‌ನಿಂದ ತಪಾಸಣೆ ನಡೆಸಲಾಗುತ್ತಿದೆ. ಸ್ಫೋಟ ಪ್ರಕರಣದ ನಂತರ ನಗರದಾದ್ಯಂತ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.