ಹುಬ್ಬಳ್ಳಿ: ನಗರದಲ್ಲಿ ನೈಟ್ ಕರ್ಫ್ಯೂ ಜಾರಿಯಲ್ಲಿದ್ದು ಕಳೆದ ರಾತ್ರಿ ಜಿಲ್ಲಾಧಿಕಾರಿ, ಹು-ಧಾ ಪೊಲೀಸ್ ಆಯುಕ್ತ ಲಾಬೂರಾಮ್ ಹಾಗೂ ತಹಶೀಲ್ದಾರ ಸಂತೋಷ ಬಿರಾದಾರ ಸಿಟಿ ರೌಂಡ್ಸ್ ಮಾಡಿದರು.
ನೈಟ್ ಕರ್ಫ್ಯೂ ಅತ್ಯಂತ ಪರಿಣಾಮಕಾರಿಯಾಗಿ ಜಾರಿಯಾಗಿದೆ. ರಾತ್ರಿ 9 ಗಂಟೆಯೊಳಗೆ ಅಂಗಡಿ ಮುಂಗಟ್ಟುಗಳು ಸಂಪೂರ್ಣವಾಗಿ ಬಂದ್ ಆಗಿವೆ. ಜನರು ಸ್ವಯಂಪ್ರೇರಣೆಯಿಂದ ನೈಟ್ ಕರ್ಫ್ಯೂಗೆ ಸ್ಪಂದಿಸಿದ್ದಾರೆ. ವೀಕೆಂಡ್ ಕರ್ಫ್ಯೂ ಸಹ ಪರಿಣಾಮಕಾರಿಯಾಗಿ ಜಾರಿ ಮಾಡುತ್ತೇವೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ್ ಹೇಳಿದರು.
ಪೊಲೀಸ್ ಆಯುಕ್ತ ಲಾಬೂರಾಮ್ ಮಾತನಾಡಿ, ಸರ್ಕಾರದ ಆದೇಶ ಎಲ್ಲರಿಗೂ ಅನ್ವಯಿಸುತ್ತದೆ. ಇದನ್ನು ಉಲ್ಲಂಘನೆ ಮಾಡಿದರೆ ಕಾನೂನು ಕ್ರಮ ಕೈಗೊಳ್ಳಲಾಗುವದೆಂದು ಎಚ್ಚರಿಕೆ ನೀಡಿದರು.