ಕರ್ನಾಟಕ

karnataka

ETV Bharat / state

ಹುಬ್ಬಳ್ಳಿಯಲ್ಲಿ ಇಸ್ಪೀಟ್, ಮಟ್ಕಾ ಅಡ್ಡೆಗಳ ಮೇಲೆ ಪೊಲೀಸ್​ ದಾಳಿ: 20ಕ್ಕೂ ಹೆಚ್ಚು ಜನರ ಬಂಧನ - ಹುಬ್ಬಳ್ಳಿಯಲ್ಲಿ ಜೂಜುಕೋರರ ಬಂಧನ

ಹುಬ್ಬಳ್ಳಿಯ ಇಸ್ಪೀಟ್​ ಅಡ್ಡೆಗಳ ಮೇಲೆ ಪೊಲೀಸರು ದಾಳಿ ನಡೆಸಿ 20ಕ್ಕೂ ಹೆಚ್ಚು ಜನರನ್ನು ಬಂಧಿಸಿದ್ದಾರೆ. ನಗರದ ಹಲವೆಡೆ ಮಟ್ಕಾ ಆಡುತ್ತಿರುವುದು ಕಂಡು ಬಂದ ಹಿನ್ನೆಲೆ ದಾಳಿ ನಡೆಸಲಾಗಿದೆ.

raid
raid

By

Published : Jun 19, 2021, 3:53 PM IST

Updated : Jun 19, 2021, 4:30 PM IST

ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯ ಇಸ್ಪೀಟು ಹಾಗೂ‌ ಮಟ್ಕಾ ಅಡ್ಡೆಗಳ ಮೇಲೆ ಪೊಲೀಸರು ದಾಳಿ ಮುಂದುವರೆಸಿದ್ದಾರೆ. ನಗರದ ಉತ್ತರ ವಿಭಾಗದ ಎಸಿಪಿ ವಿನೋದ ಮುಕ್ತೇದಾರ ನೇತೃತ್ವದಲ್ಲಿ ದಾಳಿ ನಡೆಸಿ 20 ಕ್ಕೂ ಹೆಚ್ಚು ಜನರನ್ನು ಬಂಧಿಸಿದ್ದಾರೆ.

ಇದನ್ನೂ ಓದಿ:ಯುವತಿ ಫೋನ್‌ ನಂಬರ್‌ ಕೊಡದಿದ್ದಕ್ಕೆ ಗುಂಡು ಹಾರಿಸಿ ಶೂಟ್‌ ಮಾಡುವ ಬೆದರಿಕೆ!

ಬೆಂಗೇರಿ‌ ಮನೆಯಲ್ಲಿ ‌ಇಸ್ಪೀಟ್ ಆಡುತ್ತಿದ್ದ 7 ಜನರನ್ನು ಗೋಕುಲ್ ರೋಡ್ ಠಾಣೆ ಪೊಲೀಸರು ಬಂಧಿಸಿ 13,120 ನಗದು ಹಾಗೂ 4 ಮೊಬೈಲ್ ಫೋನ್ ವಶಪಡಿಸಿಕೊಂಡಿದ್ದಾರೆ. ಕೇಶ್ವಾಪುರ ಉದಯ ನಗರದಲ್ಲಿ ಮಟ್ಕಾ ಜೂಜಾಟ ಆಡುತ್ತಿದ್ದ ಇಬ್ಬರನ್ನು ಬಂಧಿಸಿ 11,300 ನಗದು ಹಾಗೂ ಎರಡು ಫೋನ್ ವಶಪಡಿಸಿಕೊಂಡಿದ್ದಾರೆ.

ಮತ್ತೊಂದೆಡೆ ಕಾರವಾರ ರಸ್ತೆಯಲ್ಲಿ ಮಟ್ಕಾ ಆಡುತ್ತಿದ್ದ ಒಬ್ಬನನ್ನು ಬಂಧಿಸಿರುವ ಪೊಲೀಸರು 2280 ನಗದು ವಶಪಡಿಸಿಕೊಂಡಿದ್ದಾರೆ.

Last Updated : Jun 19, 2021, 4:30 PM IST

ABOUT THE AUTHOR

...view details