ಕರ್ನಾಟಕ

karnataka

ETV Bharat / state

ಕರ್ಫ್ಯೂ ರೂಲ್ಸ್ ಬ್ರೇಕ್.. 50ಕ್ಕೂ ಹೆಚ್ಚು ಆಟೋಗಳನ್ನು ವಶಕ್ಕೆ ಪಡೆದ ಪೊಲೀಸರು.. - ಕರ್ಫ್ಯೂ ನಿಯಮ ಉಲ್ಲಂಘಿಸಿದ ಆಟೋಗಳು ಸೀಜ್

ಕೋವಿಡ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಆದರೆ, ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿ ಅನಗತ್ಯವಾಗಿ ತಿರುಗಾಟ ನಡೆಸುತ್ತಿರುವವರ ಸಂಖ್ಯೆಯೂ ಜಾಸ್ತಿ ಇದೆ..

police seized auto rickshaw for violating Curfew rules
ಆಟೋಗಳನ್ನು ವಶಕ್ಕೆ ಪಡೆದ ಪೊಲೀಸರು

By

Published : May 3, 2021, 1:54 PM IST

ಹುಬ್ಬಳ್ಳಿ :ನಗರದಲ್ಲಿ ಜನತಾ ಕರ್ಫ್ಯೂ ಅವಧಿಯಲ್ಲಿ ಅನಾವಶ್ಯಕವಾಗಿ ತಿರುಗಾಟ ನಡೆಸಿದ ಸುಮಾರು 50ಕ್ಕೂ ಹೆಚ್ಚು ಆಟೋಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಚೆನ್ನಮ್ಮ ವೃತ್ತ, ಸಂಗೊಳ್ಳಿ ರಾಯಣ್ಣ ವೃತ್ತ, ಗೋಕುಲ ರಸ್ತೆ ಸೇರಿದಂತೆ ವಿವಿದೆಡೆ ಕೋವಿಡ್ ಜನತಾ ಕರ್ಫ್ಯೂ ನಿಯಮ ಉಲ್ಲಂಘನೆ ಮಾಡಿದ ಆರೋಪದಡಿ ವಾಹನಗಳನ್ನು ವಶಕ್ಕೆ ಪಡೆದುಕೊಂಡ ಪೊಲೀಸರು ದಂಡ ವಿಧಿಸಿದ್ದಾರೆ.

ಕೋವಿಡ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಆದರೆ, ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿ ಅನಗತ್ಯವಾಗಿ ತಿರುಗಾಟ ನಡೆಸುತ್ತಿರುವವರ ಸಂಖ್ಯೆಯೂ ಜಾಸ್ತಿ ಇದೆ.

ಹಾಗಾಗಿ, ಗೋಕುಲರಸ್ತೆ ಠಾಣಾ ಇನ್​ಸ್ಪೆಕ್ಟರ್​ ಖಾಲಿ ಮಿರ್ಚಿ ಹಾಗೂ ಉಪನಗರ ಠಾಣಾ ಇನ್​​ಸ್ಪೆಕ್ಟರ್​ ರವಿಚಂದ್ರನ್ ನೇತೃತ್ವದಲ್ಲಿ ಫೀಲ್ಡಿಗಿಳಿದ ಪೊಲೀಸರು ಆಟೋಗಳನ್ನು ಸೀಜ್ ಮಾಡಿದ್ದಾರೆ.

ABOUT THE AUTHOR

...view details