ಕರ್ನಾಟಕ

karnataka

ETV Bharat / state

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಲಾರಿಗಳನ್ನು ವಶಪಡಿಸಿಕೊಂಡ ಧಾರವಾಡ ಪೊಲೀಸರು

ಕಾಸರಗೋಡು ಹಾಗೂ ಮಂಗಳೂರಿನಿಂದ ರಾಜಸ್ಥಾನಕ್ಕೆ ಕರೆದೊಯ್ಯುತ್ತಿದ್ದ ಎರಡು ಲಾರಿಗಳನ್ನು ಧಾರವಾಡದ ಬಳಿ ಪೊಲೀಸರು ವಶಪಡಿಸಿಕೊಂಡು ಲಾರೀ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Lorries seized
ಲಾರಿಗಳು ವಶ

By

Published : May 19, 2020, 7:23 PM IST

ಧಾರವಾಡ: ಪ್ರತಿದಿನ ಕೊರೊನಾ ಪ್ರಕರಣಗಳು ಹೆಚ್ಚುತ್ತಿದ್ದಂತೆ ವಲಸೆ ಕಾರ್ಮಿಕರು ತಮ್ಮ ತಮ್ಮ ಸ್ಥಳಗಳಿಗೆ ಹೋಗುತ್ತಿದ್ದಾರೆ. ಸೂಕ್ತ ವಾಹನ ವ್ಯವಸ್ಥೆಯಂತೂ ಇಲ್ಲ. ಆದ್ದರಿಂದ ಜನರು ಸಿಕ್ಕ ಸಿಕ್ಕ ವಾಹನಗಳಲ್ಲಿ ಹಾಗೂ ನಡೆದುಕೊಂಡೇ ತಮ್ಮ ಊರಿಗೆ ಹೋಗುತ್ತಿದ್ದಾರೆ.

ಧಾರವಾಡದಲ್ಲಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಎರಡು ಲಾರಿಗಳನ್ನು ಪೊಲೀಸರು ವಶಕ್ಕೆ‌ ಪಡೆದಿದ್ದಾರೆ.‌‌ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಘಟನೆ ನಡೆದಿದ್ದು, ಬೆಳಗಾವಿ-ಧಾರವಾಡ ಗಡಿಯಲ್ಲಿ ಲಾರಿಗಳನ್ನು ವಶಕ್ಕೆ ಪಡೆಯಲಾಗಿದೆ. ಲಾರಿಯಲ್ಲಿ ಒಟ್ಟು 74 ಕಾರ್ಮಿಕರಿದ್ದರು ಎನ್ನಲಾಗಿದೆ. ಕಾಸರಗೋಡು ಮತ್ತು ಮಂಗಳೂರಿನಿಂದ ಹೊರಟಿದ್ದ ಕಾರ್ಮಿಕರು ರಾಜಸ್ಥಾನಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ. ಲಾರಿಗಳನ್ನು ಕೂಡಾ ಸೀಜ್ ಮಾಡಲಾಗಿದ್ದು, ಮಾಲೀಕರ ವಿರುದ್ಧ ಗರಗ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರ್ಮಿಕರಿಗೆ ಧಾರವಾಡ ನಗರದ ಕಲ್ಯಾಣ ಮಂಟಪವೊಂದರಲ್ಲಿ ಆಶ್ರಯ ಒದಗಿಸಲಾಗಿದ್ದು ಅವರನ್ನು ರಾಜಸ್ಥಾನಕ್ಕೆ ಕಳಿಸುವ ವ್ಯವಸ್ಥೆ ಮಾಡಲಾಗುವುದು ಎಂದು ಎಸ್​​​​ಪಿ ವರ್ತಿಕಾ ಕಟಿಯಾರ್ ತಿಳಿಸಿದ್ದಾರೆ.

For All Latest Updates

ABOUT THE AUTHOR

...view details