ಕರ್ನಾಟಕ

karnataka

ETV Bharat / state

ಯೋಗೀಶ್​ ಗೌಡ ಕೊಲೆ ಪ್ರಕರಣ: ತನಿಖಾಧಿಕಾರಿ ಟಿಂಗರಿಕರ್ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ - murder case of ZP member Yogesh Gowda

ಯೋಗೇಶ್​ ಗೌಡ ಹತ್ಯೆ ಪ್ರಕರಣದ ತನಿಖಾಧಿಕಾರಿ ಚೆನ್ನಕೇಶವ ಟಿಂಗರಿಕರ್ ನಿರೀಕ್ಷಣಾ ಜಾಮೀನು ಅರ್ಜಿ ಮುಂದೂಡಿಕೆಯಾಗಿದೆ.

Postponement of anticipatory bail application hearing of Tingarikar
ಚೆನ್ನಕೇಶವ ಟಿಂಗರಿಕರ್ ನಿರೀಕ್ಷಣಾ ಜಾಮೀನು ಅರ್ಜಿ ಮುಂದೂಡಿಕೆ

By

Published : Nov 11, 2020, 9:51 PM IST

ಧಾರವಾಡ: ಯೋಗೇಶ್​ ಗೌಡ ಹತ್ಯೆ ಪ್ರಕರಣದ ತನಿಖಾಧಿಕಾರಿ ಚೆನ್ನಕೇಶವ ಟಿಂಗರಿಕರ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಧಾರವಾಡದ ಹೈಕೋರ್ಟ್ ಪೀಠ ಒಂದು ವಾರ ಮುಂದೂಡಿದೆ.

ಇಂದು ವಿಚಾರಣೆ ಕೈಗೆತ್ತಿಕೊಂಡ ಹೈಕೋರ್ಟ್ ಏಕ ಸದಸ್ಯ ಪೀಠಕ್ಕೆ, ತಕರಾರು ಅರ್ಜಿ ಸಲ್ಲಿಸಲು ಸಿಬಿಐ ಪರ ವಕೀಲರು ಕಾಲಾವಕಾಶ ಕೇಳಿದ್ದಾರೆ ಎನ್ನಲಾಗಿದೆ. ಒಂದು ವಾರದಲ್ಲಿ ತಕರಾರು ಅರ್ಜಿ ಸಲ್ಲಿಸಲು ಹೈಕೋರ್ಟ್ ಸೂಚಿಸಿದೆ. ಹೀಗಾಗಿ, ಒಂದು ವಾರ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆಯಾಗಿದೆ.

ಜಿಲ್ಲಾ ನ್ಯಾಯಾಲಯ ಟಿಂಗರಿಕರ್ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಟಿಂಗರಿಕರ್ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಇಂದು ಹೈಕೋರ್ಟ್ ಅರ್ಜಿ ವಿಚಾರಣೆ ಮುಂದೂಡಿದೆ.

ABOUT THE AUTHOR

...view details