ಧಾರವಾಡ: ಯೋಗೀಶ್ ಗೌಡ ಕೊಲೆ ಪ್ರಕರಣದ ತನಿಖಾಧಿಕಾರಿ ಚನ್ನಕೇಶವ ಟಿಂಗರೀಕರ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು ನ. 30 ಕ್ಕೆ ಮುಂದೂಡಿಕೆ ಮಾಡಲಾಗಿದೆ.
ಯೋಗೀಶ್ ಗೌಡ ಕೊಲೆ ಪ್ರಕರಣ: ಟಿಂಗರೀಕರ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್ - Tingarikar Expected Bail Application
ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದ ತನಿಖಾಧಿಕಾರಿ ಚನ್ನಕೇಶವ ಟಿಂಗರೀಕರ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು ಧಾರವಾಡ ಹೈಕೋರ್ಟ್ ನ.30ಕ್ಕೆ ಮುಂದೂಡಿದೆ.
ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
ಧಾರವಾಡ ಹೈಕೋರ್ಟ್ಗೆ ಸಲ್ಲಿಸಲಾಗಿದ್ದ ನಿರೀಕ್ಷಣಾ ಜಾಮೀನು ಅರ್ಜಿಗೆ ಸಿಬಿಐ ಅಧಿಕಾರಿಗಳು ತಕರಾರು ಅರ್ಜಿ ಸಲ್ಲಿಸಿದರು. ಸಿಬಿಐ ತಕರಾರು ಅರ್ಜಿ ಬಳಿಕ ನ. 30ಕ್ಕೆ ವಿಚಾರಣೆಯನ್ನು ಮುಂದೂಡಿದೆ.
ಕೊಲೆ ನಡೆದ ವೇಳೆ ಉಪನಗರ ಠಾಣೆಯಲ್ಲಿ ಟಿಂಗರಿಕರ ಇನ್ಸ್ಪೆಕ್ಟರ್ ಆಗಿದ್ದರು. ಸಿಬಿಐ ಬಂಧನದ ಭೀತಿ ಹಿನ್ನೆಲೆ ಅವರು ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು. ಧಾರವಾಡ ಜಿಲ್ಲಾ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡಿತ್ತು.