ಹುಬ್ಬಳ್ಳಿ:ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ನಡೆಯುತ್ತಿರುವ ಅವೈಜ್ಞಾನಿಕ ಕಾಮಗಾರಿ ಹಾಗೂ ಬೇಕಾಬಿಟ್ಟಿಯಾಗಿ ತೆಗೆದ ಗುಂಡಿಗಳು ಯಾವ ಹೊತ್ತಿನಲ್ಲಿ ಯಾರ ಜೀವ ತೆಗೆದುಕೊಳ್ಳುತ್ತದೆಯೋ ಗೊತ್ತಿಲ್ಲ. ಕೇಶ್ವಾಪೂರದ ಸೇಂಟ್ ಮೇರಿ ಸ್ಕೂಲ್ ಬಳಿಯಲ್ಲಿ ತೆಗೆದಿರುವ ಗುಂಡಿಯೊಂದರಲ್ಲಿ ಬೈಕ್ ಸವಾರನೊಬ್ಬ ಬಿದ್ದಿರುವ ಘಟನೆ ಬುಧವಾರ ರಾತ್ರಿಯ ವೇಳೆಯಲ್ಲಿ ನಡೆದಿದೆ.
ಕಾಮಗಾರಿ ನಡೆಸುವ ಗುತ್ತಿಗೆದಾರರು ಹಾಗೂ ಸಿಬ್ಬಂದಿಗೆ ಸೂಚನಾ ಫಲಕಗಳನ್ನು ಕೂಡ ಹಾಕಿಲ್ಲ. ಹೀಗಾಗಿ ರಸ್ತೆಯಲ್ಲಿರುವ ದೊಡ್ಡ ಗುಂಡಿಯೊಂದರಲ್ಲಿ ಬೈಕ್ ಸವಾರ ಬಿದ್ದಿದ್ದಾನೆ. ಗಾಯಗೊಂಡಿರುವ ವ್ಯಕ್ತಿಯನ್ನು ಸ್ಥಳೀಯರು ಮೇಲೆ ಎತ್ತಿ ಮನೆಗೆ ಕಳುಹಿಸಿದ್ದಾರೆ. ಆದರೆ ಬೈಕ್ ಮೇಲೆ ಎತ್ತಲು ಇನ್ನೂ ಆಗಿಲ್ಲ.