ಕರ್ನಾಟಕ

karnataka

ETV Bharat / state

ಹುಬ್ಬಳ್ಳಿ ಮಿನಿ ವಿಧಾನಸೌಧಕ್ಕೆ ಕರೆಂಟ್ ಶಾಕ್: ಸಾರ್ವಜನಿಕರಲ್ಲಿ ಗೊಂದಲ - Hubli Mini Vidhana Soudha

ಕಳೆದ ಮೂರ್ನಾಲ್ಕು ದಿನಗಳಿಂದ ಹುಬ್ಬಳ್ಳಿಯ ಮಿನಿ ವಿಧಾನಸೌಧದಲ್ಲಿ ವಿದ್ಯುತ್ ಕಟ್ ಆಗಿದ್ದು, ಎಲ್ಲ ಕೆಲಸಗಳು ಸಂಪೂರ್ಣ ಬಂದ್ ಆಗಿವೆ.

Mini Vidhana Soudha
ಮಿನಿ ವಿಧಾನಸೌಧಕ್ಕೆ ಕರೆಂಟ್ ಶಾಕ್

By

Published : Jan 22, 2022, 8:47 AM IST

ಹುಬ್ಬಳ್ಳಿ: ಶಾರ್ಟ್ ಸರ್ಕ್ಯೂಟ್ ಸಂಭವಿಸಿದ ಹಿನ್ನೆಲೆ ಕಳೆದ ಮೂರ್ನಾಲ್ಕು ದಿನಗಳಿಂದ ನಗರದ ಮಿನಿ ವಿಧಾನಸೌಧಕ್ಕೆ ವಿದ್ಯುತ್ ಸಂಪರ್ಕವಿಲ್ಲ. ಪರಿಣಾಮ ಸಾರ್ವಜನಿಕರು ಶಕ್ತಿಸೌಧಕ್ಕೆ ಬಂದು ವಾಪಸ್​ ಹೋಗುವ ಪ್ರಸಂಗ ಬಂದೊದಗಿದೆ.

ಕಳೆದ ಮೂರ್ನಾಲ್ಕು ದಿನಗಳಿಂದ ಮಿನಿ ವಿಧಾನಸೌಧದಲ್ಲಿ ವಿದ್ಯುತ್ ಕಟ್ ಆಗಿದ್ದು, ಎಲ್ಲ ಕೆಲಸಗಳು ಸಂಪೂರ್ಣ ಬಂದ್ ಆಗಿವೆ. ಇದರಿಂದಾಗಿ ದೂರದ ಊರಿನಿಂದ ಬರುವ ಸಾರ್ವಜನಿಕರಿಗೆ ಬಹಳಷ್ಟು ತೊಂದರೆಯಾಗುತ್ತಿದೆ.

ಹುಬ್ಬಳ್ಳಿಯ ಮಿನಿ ವಿಧಾನಸೌಧದಲ್ಲಿ ವಿದ್ಯುತ್ ಕಟ್

ವಿದ್ಯುತ್ ಸಂಪರ್ಕ ಕಡಿತದ ಬಗ್ಗೆ ನಮಗೆ ಮೊದಲೇ ಮಾಹಿತಿ ನೀಡಿದ್ದರೆ ನಾವು ದೂರದಿಂದ ಇಲ್ಲಿಯ ತನಕ ಬರುತ್ತಿರಲಿಲ್ಲ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜೊತೆಗೆ ಸೋಮವಾರದಂದು ವಿದ್ಯುತ್ ಸಂಪರ್ಕ ಕಲ್ಪಿಸುವ ಸಾಧ್ಯತೆ ಇದೆ.

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ABOUT THE AUTHOR

...view details