ಹುಬ್ಬಳ್ಳಿ:ಇಲ್ಲಿನ ವಿದ್ಯಾನಗರದ ಜವಳಿ ಗಾರ್ಡನ್, ಅಕ್ಷಯ ಕಾಲೋನಿ ಹಾಗೂ ಚೇತನಾ ಕಾಲೇಜು ಎದುರಿನ ಪ್ರದೇಶಗಳಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಾಗೂ ಬೃಹತ್, ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ ಶೆಟ್ಟರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಹುಬ್ಬಳ್ಳಿಯ ಪ್ರವಾಹಪೀಡಿತ ಪ್ರದೇಶಗಳಿಗೆ ಸಚಿವರ ಭೇಟಿ, ಪರಿಶೀಲನೆ - Central minister Prahlad joshi visit
ಹುಬ್ಬಳ್ಳಿಯ ವಿದ್ಯಾನಗರದ ಜವಳಿ ಗಾರ್ಡನ್, ಅಕ್ಷಯ ಕಾಲೋನಿ ಹಾಗೂ ಚೇತನಾ ಕಾಲೇಜು ಎದುರಿನ ಪ್ರದೇಶಗಳಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಾಗೂ ಬೃಹತ್, ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ ಶೆಟ್ಟರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
![ಹುಬ್ಬಳ್ಳಿಯ ಪ್ರವಾಹಪೀಡಿತ ಪ್ರದೇಶಗಳಿಗೆ ಸಚಿವರ ಭೇಟಿ, ಪರಿಶೀಲನೆ](https://etvbharatimages.akamaized.net/etvbharat/prod-images/768-512-4893304-thumbnail-3x2-hbl.jpg)
ಹುಬ್ಬಳ್ಳಿಯ ಪ್ರವಾಹಪೀಡಿತ ಪ್ರದೇಶಗಳಿಗೆ ಸಚಿವರ ಭೇಟಿ
ನಗರದಲ್ಲಿ ಮಳೆಯಿಂದ ಅಪಾರ ಪ್ರಮಾಣದಲ್ಲಿ ಸಾರ್ವಜನಿಕರು ಸಂಕಷ್ಟ ಅನುಭವಿಸುತ್ತಿದ್ದು, ಮಹಾನಗರ ಪಾಲಿಕೆ ಜನರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಸಚಿವರು ಸೂಚನೆ ನೀಡಿದರು.
ಯಾವುದೇ ಕಾರಣಕ್ಕೂ ಚರಂಡಿ ನಿರ್ಮಾಣ ಹಾಗೂ ರಸ್ತೆ ದುರಸ್ತಿ ಕಾರ್ಯಕ್ಕೆ ಹಿಂದೇಟು ಹಾಕದೇ ಕೂಡಲೇ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಎಲ್ಲ ಚರಂಡಿ, ರಸ್ತೆ ಹಾಗೂ ಒಳಚರಂಡಿಗೆ ಸೂಕ್ತ ನಿರ್ಧಾರ ಕೈಗೊಂಡು ಸರಿಪಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ಹು-ಧಾ ಮಹಾನಗರ ಪಾಲಿಕೆ ಕಮೀಷನರ್ ಸುರೇಶ ಇಟ್ನಾಳ ಸೇರಿದಂತೆ ಇತರರು ಇದ್ದರು.