ಹುಬ್ಬಳ್ಳಿ: ನಗರದ ದೇಶಪಾಂಡೆ ಕೃಷ್ಣ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದ್ದ, ಪೌರತ್ವ ಕಾಯ್ದೆ ಕುರಿತಾಗಿ ಸಾರ್ವಜನಿಕ ಜಾಗೃತಿ ಸಮಾವೇಶದ ಪೂರ್ವಭಾವಿ ಸಭೆಯನ್ನು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಇದೇ 18ರಂದು ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಹುಬ್ಬಳ್ಳಿ ನಗರಕ್ಕೆ ಭೇಟಿ ನೀಡುತ್ತಿದ್ದು,ಕಾರ್ಯಕರ್ತರು ಉತ್ತಮ ರೀತಿಯಲ್ಲಿ ಕೆಲಸ ಕಾರ್ಯ ಮಾಡುವ ಮೂಲಕ ಸಮಾವೇಶದ ಯಶಸ್ಸಿಗೆ ಶ್ರಮಿಸಬೇಕು ಎಂದರು.