ಕರ್ನಾಟಕ

karnataka

ETV Bharat / state

ಕಾಂಗ್ರೆಸ್ ಪೌರತ್ವ ಕಾಯ್ದೆ ತಿರುಚುವ ಕೆಲಸ ಮಾಡುತ್ತಿದೆ.. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ - ಪೌರತ್ವ ಕಾಯ್ದೆ ತಿದ್ದುಪಡಿ ವಿಚಾರ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಹೇಳಿಕೆ

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ಮಾಡುತ್ತಿರುವವರಿಗೆ ಕಾನೂನು ಏನು ಅನ್ನೋದು ಗೊತ್ತಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

By

Published : Dec 17, 2019, 9:03 PM IST

ಹುಬ್ಬಳ್ಳಿ: ಪೌರತ್ವತಿದ್ದುಪಡಿಕಾಯ್ದೆ ವಿರೋಧಿಸಿ ಪ್ರತಿಭಟನೆ ಮಾಡುತ್ತಿರುವವರಿಗೆ ಕಾನೂನು ಏನು ಅನ್ನೋದು ಗೊತ್ತಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಹಾಗೂ ಅದರ ಮಿತ್ರ ಪಕ್ಷಗಳು ಪೌರತ್ವ ಕಾಯ್ದೆ ತಿರುಚುವ ಕೆಲಸ ಮಾಡುತ್ತಿವೆ. ಪ್ರತಿಭಟನಾಕಾರರ ಭಾವನೆ ಕೆರಳಿಸುವ ಕೆಲಸ ಮಾಡುತ್ತಿದ್ದಾರೆ ಎಂದರು.

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ..

ಇದು ಯಾವುದೇ ನಾಗರಿಕನ ಪೌರತ್ವ ಕಸಿದುಕೊಳ್ಳುವ ಕಾಯ್ದೆಯಲ್ಲ. ಜಗತ್ತಿನ ನಾನಾ ದೇಶಗಳಿಂದ ಭಾರತಕ್ಕೆ ಬರ್ತಾರೆ ಅಂದರೆ ಕಾಂಗ್ರೆಸ್​ಗೆ ಹೊಟ್ಟೆ ಉರಿ. ಇದಕ್ಕೆ ಕಾಂಗ್ರೆಸ್ಸಿನವರು ಉತ್ತರ ನೀಡಬೇಕು ಎಂದರು. ಕಾಂಗ್ರೆಸ್ಸಿನವರು ಹಿಂದೂ ವಿರೋಧಿ ಹಾಗೂ ಸ್ವಾರ್ಥಕ್ಕಾಗಿ ಪೌರತ್ವ ಹೋರಾಟ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ABOUT THE AUTHOR

...view details