ಧಾರವಾಡ: ಎನ್ಆರ್ಸಿ, ಸಿಎಎ ಹಾಗೂ ಎನ್ಪಿಆರ್ ಅವಶ್ಯಕತೆ ನಮಗಿಲ್ಲ, ಪ್ರತಿ 10 ವರ್ಷಕ್ಕೊಮ್ಮೆ ಸೆನ್ಸಸ್ ಆಗುತ್ತೆ, ಅದರಲ್ಲಿ ಜನಸಂಖ್ಯೆ ಗೊತ್ತಾಗುತ್ತದೆ. ದೇಶದಲ್ಲಿ ಹಲವು ಸಮಸ್ಯೆಗಳವೆ ಅದರ ಬಗ್ಗೆ ಗಮನ ಹರಿಸಲಿ ಎಂದು ಅಂಬೇಡ್ಕರ್ ಮೊಮ್ಮಗ ಪ್ರಕಾಶ ಅಂಬೇಡ್ಕರ್ ಹೇಳಿದರು.
ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಜ ಮುಚ್ಚಿ ಹಾಕಲು ಪ್ರಯತ್ನ ನಡೆದಿದೆ ಇದನ್ನ ನಾವು ಜನರ ಬಳಿ ತೆಗೆದುಕೊಂಡು ಹೋಗುತಿದ್ದೇವೆ, ಜನ ಕೂಡಾ ಅರ್ಥಿಕತೆ ಬಗ್ಗೆ ಮಾತನಾಡುತಿದ್ದಾರೆ. ಸರ್ಕಾರದ ವಿರುದ್ಧ ಧ್ವನಿ ಎತ್ತುವುದು ಇಂದು ಅವಶ್ಯಕ, ದೇಶದಲ್ಲಿ ಡಿಟೆನ್ಷನ್ ಕ್ಯಾಂಪ್ ಮಾಡಲಾಗುತ್ತಿದೆ. ಡಿಟೆನ್ಷನ್ ಕ್ಯಾಂಪ ಮಾಡುವುದರ ಉದ್ದೇಶ ಏನು ಎನ್ಆರ್ಸಿ ತರುವುದಕ್ಕಾಗಿಯೇ ಅದನ್ನ ಮಾಡಲಾಗಿದೆ ಎಂದರು.