ಹುಬ್ಬಳ್ಳಿ: ಧಾರವಾಡ ಲೋಕಸಭಾ ಚುನಾವಣಾ ಕಣದಲ್ಲಿರುವ ಬಿಜೆಪಿ ಅಭ್ಯರ್ಥಿ, ಹಾಲಿ ಸಂಸದ ಪ್ರಹ್ಲಾದ್ ಜೋಶಿ ಇಂದು ನಾಮಪತ್ರ ಸಲ್ಲಿಕೆಗೂ ಮುನ್ನ ಸಿದ್ಧಾರೂಢ ಶ್ರೀಗಳ ಗದ್ದುಗೆ ದರ್ಶನ ಪಡೆದರು.
ನಾಮಪತ್ರ ಸಲ್ಲಿಕೆಗೂ ಮುನ್ನ ಸಿದ್ಧಾರೂಢ ಶ್ರೀಗಳ ಗದ್ದುಗೆ ದರ್ಶನ ಪಡೆದ ಪ್ರಹ್ಲಾದ್ ಜೋಶಿ - Lok Sabha Elections
ಧಾರವಾಡ ಲೋಕಸಭಾ ಚುನಾವಣಾ ಕಣ ರಂಗೇರುತ್ತಿದ್ದು, ಹಾಲಿ ಸಂಸದ ಪ್ರಹ್ಲಾದ್ ಜೋಶಿ ಅವರು ನಾಲ್ಕನೇ ಬಾರಿಯ ಗೆಲುವಿಗೆ ತಾಲೀಮು ನಡೆಸಿದ್ದಾರೆ.
![ನಾಮಪತ್ರ ಸಲ್ಲಿಕೆಗೂ ಮುನ್ನ ಸಿದ್ಧಾರೂಢ ಶ್ರೀಗಳ ಗದ್ದುಗೆ ದರ್ಶನ ಪಡೆದ ಪ್ರಹ್ಲಾದ್ ಜೋಶಿ](https://etvbharatimages.akamaized.net/etvbharat/images/768-512-2888096-853-6e4ece53-e647-4296-9409-8a834356c16a.jpg)
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರ ಆಶೀರ್ವಾದಿಂದ ಮತ್ತೆ ಗೆದ್ದು ಬರಲಿದ್ದೇನೆ ಎಂಬ ನಂಬಿಕೆ ಇದೆ. ಪ್ರಧಾನಿ ನರೇಂದ್ರ ಮೋದಿಯವರ ಅಭಿವೃದ್ಧಿ ಕಾರ್ಯಗಳು ನನಗೆ ಶ್ರೀರಕ್ಷೆಯಾಗಲಿವೆ. ಕಳೆದ ಬಾರಿ ಲಕ್ಷಕ್ಕೂ ಅಧಿಕ ಮತಗಳಿಂದ ಜಯ ಸಾಧಿಸಿದ್ದೆ. ಈ ಬಾರಿ 2 ಲಕ್ಷ ಮತಗಳ ಅಂತರಿಂದ ಜಯ ಸಾಧಿಸುವ ವಿಶ್ವಾಸ ವ್ಯಕ್ತಪಡಿಸಿದರು. ನಾಮಪತ್ರ ಸಲ್ಲಿಕೆ ವೇಳೆ ಮಾಜಿ ಸಿಎಂ ಜಗದೀಶ ಶೆಟ್ಟರ್, ಗೋವಿಂದ ಕಾರಜೋಳ, ಕೋಟಾ ಶ್ರೀನಿವಾಸ ಪೂಜಾರಿ, ಕೆ.ಎಸ್.ಈಶ್ವರಪ್ಪ ಹಾಜರಿದ್ದರು.ಇದೇ ಸಂದರ್ಭದಲ್ಲಿ ಕೈ ಪಕ್ಷದ ಮುಖಂಡ ಮಹೇಶ್ ನಾಲವಾಡ ಕಾಂಗ್ರೆಸ್ ಪಕ್ಷವನ್ನು ತೊರೆದು ಅಧಿಕೃತವಾಗಿ ಬಿಜೆಪಿ ಸೇರಲಿದ್ದಾರೆ ಎಂದು ತಿಳಿಸಿದರು.