ಹುಬ್ಬಳ್ಳಿ:ಐವರು ಮಾಧ್ಯಮ ಪ್ರತಿನಿಧಿಗಳು ಮುಂಜಾಗ್ರತಾ ಕ್ರಮವಾಗಿ ಸ್ವಯಂ ಪ್ರೇರಣೆಯಿಂದ ಹೋಮ್ ಕ್ವಾರಂಟೈನ್ಗೆ ಒಳಗಾಗಿದ್ದಾರೆ.
ನಗರದ ವಿವಿಧ ಮಾಧ್ಯಮ ಸಂಸ್ಥೆಗಳಿಗೆ ಸೇರಿದ ಐವರು ಮಾಧ್ಯಮ ಪ್ರತಿನಿಧಿಗಳು ತಮ್ಮಲ್ಲಿ ಕೊರೊನಾದ ಯಾವುದೇ ಲಕ್ಷಣಗಳಿಲ್ಲದಿದ್ದರೂ ಮುಂಜಾಗ್ರತಾ ಕ್ರಮವಾಗಿ ಸ್ವಯಂ ಪ್ರೇರಣೆಯಿಂದ ಹೋಮ್ ಕ್ವಾರಂಟೈನ್ಗೆ ಒಳಗಾಗಿದ್ದಾರೆ.
ಏ.9 ರಂದು ಶಬ್ ಎ ಬರಾತ್ ಆಚರಣೆಯ ಕುರಿತು ವರದಿಗಾಗಿ ಅವರು ಹುಬ್ಬಳ್ಳಿಯ ತೊರವಿಹಕ್ಕಲದ ಖಬರಸ್ತಾನಕ್ಕೆ ತೆರಳಿದ್ದರು. ಸ್ಮಶಾನದ ಕಾವಲುಗಾರನಿಗೆ (ಪಿ- 363) ಕೋವಿಡ್ ಸೋಂಕು ಇರುವುದು ಏ.18 ರಂದು ದೃಢಪಟ್ಟ ಹಿನ್ನೆಲೆಯಲ್ಲಿ ಈ ಎಲ್ಲಾ ಐವರು ಪ್ರತಿನಿಧಿಗಳನ್ನು ದ್ವಿತೀಯ ಹಂತದ ಸಂಪರ್ಕಿತರು ಎಂದು ಪರಿಗಣಿಸಲಾಗಿದೆ,
ಮುನ್ನೆಚ್ಚರಿಕೆ ಕ್ರಮವಾಗಿ ಹೋಮ್ ಕ್ವಾರಂಟೈನ್ ಗೆ ಒಳಪಟ್ಟಿದ್ದಾರೆ. ಈ ಐದೂ ಜನ ಮಾಧ್ಯಮ ಪ್ರತಿನಿಧಿಗಳ ಆರೋಗ್ಯ ಸ್ಥಿರವಾಗಿದೆ.