ಕರ್ನಾಟಕ

karnataka

ETV Bharat / state

ಪರೀಕ್ಷಾ ಕೇಂದ್ರದ ಮುಖ್ಯೋಪಾಧ್ಯಾಯರೊಂದಿಗೆ ಪೊಲೀಸ್ ಆಯುಕ್ತ ಆರ್.ದಿಲೀಪ್ ಸಮಾಲೋಚನೆ - Hubli latest news

ರಾಜ್ಯಾದ್ಯಂತ ಹತ್ತನೇ ತರಗತಿಯ ಪರೀಕ್ಷೆ ನಡೆಯುತ್ತಿದ್ದು, ವಿದ್ಯಾರ್ಥಿಗಳು ಮಾತ್ರವಲ್ಲದೆ ಪೋಷಕರು, ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕರು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕು ಎಂದು ಹು-ಧಾ ಮಹಾನಗರ ಪೊಲೀಸ್ ಆಯುಕ್ತ ಆರ್.ದಿಲೀಪ್ ಮನವಿ ಮಾಡಿಕೊಂಡರು.

R. Dileep
R. Dileep

By

Published : Jun 26, 2020, 9:23 PM IST

ಹುಬ್ಬಳ್ಳಿ: ಎಸ್​ಎಸ್​ಎಲ್​ಸಿ ಪರೀಕ್ಷೆ ಹಿನ್ನೆಲೆ ವಿದ್ಯಾರ್ಥಿಗಳು, ಪೋಷಕರು, ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕರು ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕು ಎಂದು ಹು-ಧಾ ಮಹಾನಗರ ಪೊಲೀಸ್ ಆಯುಕ್ತ ಆರ್ ದಿಲೀಪ್ ಮನವಿ ಮಾಡಿಕೊಂಡರು.

ನಗರದ ಬಿವಿಬಿ ಆವರಣದಲ್ಲಿರುವ ಸಭಾಭವನದಲ್ಲಿಂದು, ಎಸ್​ಎಸ್​ಎಲ್​ಸಿ ಪರೀಕ್ಷೆ ನಡೆಯುವ ಕೇಂದ್ರಗಳ ಎಲ್ಲಾ ಶಾಲಾ ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕರೊಂದಿಗೆ ಸಮಾಲೋಚನೆ ನಡೆಸಿದರು.

ರಾಜ್ಯಾದ್ಯಂತ 10ನೇ ತರಗತಿಯ ಪರೀಕ್ಷೆ ನಡೆಯುತ್ತಿದೆ. ವಿದ್ಯಾರ್ಥಿಗಳು ಮಾತ್ರವಲ್ಲದೆ ಪೋಷಕರು, ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕರು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕು ಎಂದು ಆರ್ ದಿಲೀಪ್ ಮನವಿ ಮಾಡಿಕೊಂಡರು.

ವಿದ್ಯಾರ್ಥಿಗಳಲ್ಲಿರುವ ಪರೀಕ್ಷೆಯ ಗೊಂದಲವನ್ನು ಹೋಗಲಾಡಿಸಿ ಶೈಕ್ಷಣಿಕ ಚಟುವಟಿಕೆಗಳಿಗೆ ಹೊಸ ನಾಂದಿ ಹಾಡಲು, ಸರ್ಕಾರ ಸೂಕ್ತ ಕ್ರಮಗಳನ್ನು ಜರುಗಿಸಿ ಪರೀಕ್ಷೆ ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ಎಲ್ಲರೂ ತಮ್ಮ-ತಮ್ಮ ಜವಾಬ್ದಾರಿಯನ್ನು ನಿಭಾಯಿಸಬೇಕು ಎಂದು ಸಲಹೆ ನೀಡಿದರು.

ABOUT THE AUTHOR

...view details