ಕರ್ನಾಟಕ

karnataka

ETV Bharat / state

ಪ್ರಧಾನಿ ಮೋದಿಯಿಂದ 12ಕ್ಕೆ ವಿಶ್ವದ ಅತಿದೊಡ್ಡ ಹುಬ್ಬಳ್ಳಿ ರೈಲ್ವೆ ಪ್ಲಾಟ್​ಫಾರ್ಮ್​ ಲೋಕಾರ್ಪಣೆ

ವಿಶ್ವದರ್ಜೆಯ ಪ್ಲಾಟ್‌ಫಾರ್ಮ್‌ ಆಗಿ ಹೊರ ಹೊಮ್ಮಿರುವ ನೈಋತ್ಯ ರೈಲ್ವೆ ವಲಯದ ಹುಬ್ಬಳ್ಳಿಯ ರೈಲ್ವೆ ಪ್ಲಾಟ್‌ಫಾರ್ಮ್‌ ಅನ್ನು ಅಧಿಕೃತವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ.

worlds largest Hubli railway platform
ವಿಶ್ವದ ಅತಿದೊಡ್ಡ ಹುಬ್ಬಳ್ಳಿ ರೈಲ್ವೆ ಪ್ಲಾಟ್​ಫಾರ್ಮ್

By

Published : Mar 9, 2023, 3:25 PM IST

ಹುಬ್ಬಳ್ಳಿ:ವಿಶ್ವದರ್ಜೆಯ ಪ್ಲಾಟ್‌ಫಾರ್ಮ್‌ ಆಗಿ ಹೊರ ಹೊಮ್ಮಿರುವ ನೈಋತ್ಯ ರೈಲ್ವೆ ವಲಯದ ಹುಬ್ಬಳ್ಳಿಯ ರೈಲ್ವೆ ಪ್ಲಾಟ್‌ಫಾರ್ಮ್‌ನ್ನು ಅಧಿಕೃತವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಉದ್ಘಾಟನೆ ಮಾಡಲಿದ್ದಾರೆ. ಶ್ರೀ ಸಿದ್ದಾರೂಢ ಸ್ವಾಮಿ ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ಅಭಿವೃದ್ಧಿಪಡಿಸಿದ ವಿಶ್ವದ ಅತಿ ಉದ್ದದ ರೈಲ್ವೆ ಪ್ಲಾಟ್‌ಫಾರ್ಮ್‌ನ ಉದ್ಘಾಟನೆಯನ್ನು ಸ್ವತಃ ಪ್ರಧಾನಿ ನರೇಂದ್ರ ಮೋದಿಯವರೇ ಮಾಡಲಿದ್ದಾರೆ. ಮಾರ್ಚ್ 12ಕ್ಕೆ ಹುಬ್ಬಳ್ಳಿ - ಧಾರವಾಡಕ್ಕೆ ಪ್ರಧಾನಿ ಭೇಟಿ ನೀಡಲಿದ್ದಾರೆ. ಧಾರವಾಡ ಐಐಟಿ ಕಟ್ಟಡ ಉದ್ಘಾಟನೆ ಜೊತೆಗೆ ಹುಬ್ಬಳ್ಳಿಯಲ್ಲಿರುವ ವಿಶ್ವದ ಅತಿ ಉದ್ದದ ರೈಲ್ವೆ ಪ್ಲಾಟ್‌ಫಾರ್ಮ್‌ನ್ನು ಅಧಿಕೃತವಾಗಿ ಲೋಕಾರ್ಪಣೆ ಮಾಡಲಿದ್ದಾರೆ ಎಂದು ನೈಋತ್ಯ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಅನೀಶ್ ಹೆಗ್ಡೆ ತಿಳಿಸಿದರು.

10 ಮೀಟರ್‌ ಅಗಲದೊಂದಿಗೆ 1,505 ಮೀಟರ್​ ಪ್ಲಾಟ್‌ಫಾರ್ಮ್‌ ವಿಸ್ತರಣೆ:ಶ್ರೀ ಸಿದ್ದಾರೂಢ ಸ್ವಾಮಿ ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ಇದಕ್ಕೂ ಮುನ್ನ 1ನೇ ಪ್ಲಾಟ್‌ಫಾರ್ಮ್‌ 550 ಮೀಟರ್‌ ಉದ್ದ ಹೊಂದಿತ್ತು. ಇದೀಗ ಈ ಪ್ಲಾಟ್‌ಫಾರ್ಮ್‌ನ್ನು ವಿಸ್ತರಿಸಿ 10 ಮೀಟರ್‌ ಅಗಲದೊಂದಿಗೆ 1,505 ಮೀಟರ್​ಗೆ ವಿಸ್ತರಣೆ ಮಾಡಲಾಗಿದೆ. ಹುಬ್ಬಳ್ಳಿಯಲ್ಲಿ ಈ ಹೊಸ ರೈಲು ಪ್ಲಾಟ್‌ಫಾರ್ಮ್‌ ಲೋಕಾರ್ಪಣೆ ಮಾಡಿದ ನಂತರ 1,366 ಮೀಟರ್ ಉದ್ದದ ಗೋರಖ್‌ಪುರ ರೈಲು ನಿಲ್ದಾಣವನ್ನು ಹಿಂದಿಕ್ಕಲಿದೆ. ಐಐಟಿ ಕ್ಯಾಂಪಸ್​ನಿಂದಲೇ ಶ್ರೀ ಸಿದ್ದಾರೂಢ ಸ್ವಾಮಿ ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ಅಭಿವೃದ್ಧಿಪಡಿಸಿದ ವಿಶ್ವದ ಅತಿ ಉದ್ದದ ರೈಲ್ವೆ ಪ್ಲಾಟ್‌ಫಾರ್ಮ್‌ ಲೋಕಾರ್ಪಣೆಯನ್ನು ವಿಡಿಯೋ ಕಾನ್ಪರೆನ್ಸ್ ಮೂಲಕ ಸಾಂಕೇತಿಕವಾಗಿ ಮಾಡಲಿದ್ದಾರೆ.

ಎರಡು ವರ್ಷಗಳ ಹಿಂದೆ ಉದ್ಘಾಟನೆಗೆ ಸಿದ್ಧವಾಗಿತ್ತು. ಕಳೆದ ಅಕ್ಟೋಬರ್‌ನಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹುಬ್ಬಳ್ಳಿ - ಧಾರವಾಡ ಅವಳಿ ನಗರಕ್ಕೆ ಭೇಟಿ ನೀಡಿದರೂ ಈ ಪ್ಲಾಟ್‌ಫಾರ್ಮ್‌ ಉದ್ಘಾಟನೆ ಮಾಡಿರಲಿಲ್ಲ. ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರೇ ಈ ಪ್ಲಾಟ್​ಫಾರಂ ಉದ್ಘಾಟಿಸಲಿದ್ದಾರೆ. ಧಾರವಾಡ ಐಐಟಿ ಕಾರ್ಯಕ್ರಮದಲ್ಲಿಯೇ ಪ್ಲಾಟ್‌ಫಾರ್ಮ್‌ ಲೋಕಾರ್ಪಣೆ ಮಾಡಲಿದ್ದಾರೆ.

ಮಂಡ್ಯಕ್ಕೂ ಪ್ರಧಾನಿ ಮೋದಿ ಭೇಟಿ: ಮಾರ್ಚ್ 12ರಂದು ಬೆಂಗಳೂರು ಮೈಸೂರು ದಶಪಥ ಹೆದ್ದಾರಿಯನ್ನು ಮದ್ದೂರು ತಾಲೂಕಿನ ಗೆಜ್ಜಲಗೆರೆ ಬಳಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಉದ್ಘಾಟನೆ ಮಾಡಲಿದ್ದು, ಈ ಹಿನ್ನೆಲೆ ಕಾರ್ಯಕ್ರಮದ ಸಿದ್ದತೆಯನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಜನ ಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಜೊತೆ ಪರಿಶೀಲನೆ ನಡೆಸಿದ್ದರು. ಬಳಿಕ ಅಧಿಕಾರಿಗಳು ಮತ್ತು ಬಿಜೆಪಿ ಮುಖಂಡರ ಜೊತೆ ಸಭೆ ಮಾಡಿದ್ದರು.

ದಶಪಥ ಹೆದ್ದಾರಿ ಉದ್ಘಾಟನೆ ನಂತರ ಬೃಹತ್ ಸಮಾವೇಶ ನಡೆಯಲಿದ್ದು, ಕಾರ್ಯಕ್ರಮ ಭರ್ಜರಿ ಯಶಸ್ಸು ಕಾಣಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿದ್ದರು. ಈಗಾಗಲೇ ಬೆಳಗಾವಿ, ಹುಬ್ಬಳ್ಳಿ ನಗರಗಳಲ್ಲಿ ಬೃಹತ್ ಸಮಾವೇಶಗಳು ನಡೆದಿವೆ. ಆ ಎರಡು ಕಾರ್ಯಕ್ರಮಗಳಿಗಿಂತ ಮಂಡ್ಯದ ಕಾರ್ಯಕ್ರಮ ಬಹುದೊಡ್ಡ ಕಾರ್ಯಕ್ರಮವಾಗಬೇಕು. ಹೀಗಾಗಿ ಜಿಲ್ಲೆಯ ಪ್ರತಿಯೊಂದು ವಿಧಾನಸಭಾ ಕ್ಷೇತ್ರದ ಪ್ರತಿಯೊಂದು ಮನೆಯಿಂದ ಒಬ್ಬೊಬ್ಬ ಕಾರ್ಯಕರ್ತರನ್ನು ಕರೆತರುವ ವ್ಯವಸ್ಥೆ ಮಾಡಬೇಕು ಎಂದು ಅವರು ಹೇಳಿದ್ದರು. ಕಾಂಗ್ರೆಸ್ ಕಾರ್ಯಕ್ರಮಗಳಿಗೆ 500 ರೂ. ಕೊಟ್ಟು ಕರೆತನ್ನಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಹೇಳಿದ್ದಾರೆ. ಆದರೆ, ನಮ್ಮ ಪಕ್ಷದಲ್ಲಿ ಯಾವ ಕಾಲಕ್ಕೂ ಆ ರೀತಿ ಮಾಡಿಲ್ಲ. ನಮ್ಮ ಪಕ್ಷದಲ್ಲಿ ಮೋದಿ, ಅಮಿತ್ ಶಾ ಬಂದರೇ ಕಾರ್ಯಕರ್ತರು ತಾವಾಗಿಯೇ ಬರ್ತಾರೆ ಎಂದು ತಿಳಿಸಿದ್ದರು.

ಇದನ್ನೂ ಓದಿ:ಪಂದ್ಯ ವೀಕ್ಷಿಸಿ ಮೋದಿ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಂಡ ಆಸೀಸ್​​ ಪಿಎಂ: ರನ್​ ಕಲೆಹಾಕುತ್ತಿರುವ ಕಾಂಗರೂ ಪಡೆ

ABOUT THE AUTHOR

...view details