ಹುಬ್ಬಳ್ಳಿ:ಸಾಮಾಜಿಕ ಅಂತರ ನಿಯಮ ಪಾಲಿಸದೇ ಹೆಚ್ಚು ಪ್ರಯಾಣಿಕರನ್ನು ಕೊಂಡೊಯ್ಯುತ್ತಿದ್ದ 3 ಖಾಸಗಿ ನಗರಸಾರಿಗೆ ವಾಹನಗಳು, ಆಟೋರಿಕ್ಷಾ ,ಮ್ಯಾಕ್ಸಿಕ್ಯಾಬ್ ಹಾಗೂ ಸರಕು ಸಾಗಣೆ ವಾಹನ ವಶಕ್ಕೆ ಪಡೆದುಕೊಳ್ಳಲಾಗಿದೆ.
ಸಾಮಾಜಿಕ ನಿಯಮ ಉಲ್ಲಂಘನೆ: ಮೂರು ಬಸ್, ಆಟೋರಿಕ್ಷಾ ವಶ - ಸಾಮಾಜಿಕ ಅಂತರ ನಿಯಮ ಉಲ್ಲಂಘನೆ
ಕೊರೊನಾ ಮಾರ್ಗಸೂಚಿ ಗಾಳಿಗೆ ತೋರಿ ಹೆಚ್ಚು ಜನರನ್ನ ತುಂಬಿಕೊಂಡು ಹೋಗುತ್ತಿದ್ದ ಮೂರು ಖಾಸಗಿ ಬಸ್ ವಶಕ್ಕೆ ಪಡೆದುಕೊಳ್ಳುವಲ್ಲಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.
private bus and auto ricks seized in Hubbali
ನಿಯಮ ಉಲ್ಲಂಘನೆ ಮಾಡಿರುವ ಕಾರಣ ಹುಬ್ಬಳ್ಳಿ-ಧಾರವಾಡ ಪೂರ್ವ ಮತ್ತು ಪಶ್ಚಿಮ ವಿಭಾಗದ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಪ್ರತ್ಯೇಕವಾಗಿ ಒಟ್ಟು ಒಂಬತ್ತು ಪ್ರಕರಣಗಳನ್ನು ದಾಖಲಿಸಿ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.
ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ್ ಅವರ ನಿರ್ದೇಶನದ ಮೇರೆಗೆ ಈ ಕಾರ್ಯಾಚರಣೆ ಆರ್ಟಿಓ ಅಪ್ಪಯ್ಯ ನಾಲತ್ವಾಡಮಠ ಹಾಗೂ ಸಿ.ಡಿ.ನಾಯಕ್ ನೇತೃತ್ವದಲ್ಲಿ ಅವಳಿ ನಗರದಲ್ಲಿ ನಡೆದಿದೆ.