ಹುಬ್ಬಳ್ಳಿ:ಪುಣೆಯಿಂದ ಉಡುಪಿಗೆ ತೆರಳುತ್ತಿದ್ದ ಖಾಸಗಿ ಬಸ್ನ ಹಿಂಬದಿ ಚಕ್ರ ಸ್ಫೋಟಗೊಂಡು ನಡು ರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ಹುಬ್ಬಳ್ಳಿ ಹೊರವಲಯದ ರಾಷ್ಟ್ರೀಯ ಹೆದ್ದಾರಿ 4ರ ಕಾರವಾರ ರಸ್ತೆಯಲ್ಲಿ ನಡೆದಿದೆ. ಬಸ್ನಲ್ಲಿದ್ದ 30ಕ್ಕೂ ಹೆಚ್ಚು ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕಾರವಾರ ರಸ್ತೆಯ ಬಳಿ ಶನಿವಾರ ತಡರಾತ್ರಿ 2.45ರ ಸುಮಾರಿಗೆ ರೇಷ್ಮಾ ಟ್ರಾವೆಲ್ಸ್ಗೆ ಸೇರಿದ ಖಾಸಗಿ ಬಸ್ ಬೆಂಕಿಗೆ ತುತ್ತಾಗಿದೆ. ಘಟನೆ ಸಂಭವಿಸಿದ ತಕ್ಷಣ ಚಾಲಕ ಬಸ್ ನಿಲ್ಲಿಸಿ, 30ಕ್ಕೂ ಹೆಚ್ಚು ಪ್ರಯಾಣಿಕರನ್ನು ಕೆಳಗೆ ಇಳಿಸಿದ್ದಾನೆ.