ಕರ್ನಾಟಕ

karnataka

ETV Bharat / state

ಖಾಸಗಿ ಆಸ್ಪತ್ರೆಗಳ ಒಪಿಡಿ ಬಂದ್.. ಹುಬ್ಬಳ್ಳಿಯಲ್ಲಿ ರೋಗಿಗಳು ಪರದಾಡುವ ಸ್ಥಿತಿ.. - hospital OPD's bund

ಖಾಸಗಿ ಆಸ್ಪತ್ರೆಗಳಿಂದ‌ ಸೂಕ್ತ ಚಿಕಿತ್ಸೆ ಸಿಗದೆ ಮನೆ ಮದ್ದಿಗೆ ಜನ ಮುಂದಾಗಿದ್ದಾರೆ. ಕೇವಲ ತುರ್ತು ಪರಿಸ್ಥಿತಿಯಲ್ಲಿ ಮಾತ್ರ ಚಿಕಿತ್ಸೆ ನೀಡಲಾಗುತ್ತಿದೆ.

ಖಾಸಗಿ ಆಸ್ಪತ್ರೆ
ಖಾಸಗಿ ಆಸ್ಪತ್ರೆ

By

Published : Apr 13, 2020, 1:27 PM IST

ಹುಬ್ಬಳ್ಳಿ :ಲಾಕ್‌ಡೌನ್ ಇರುವುದರಿಂದ ರೋಗಿಗಳು‌ ಪರದಾಡುವ ಸ್ಥಿತಿ‌ ನಿರ್ಮಾಣವಾಗಿದೆ. ಖಾಸಗಿ ಆಸ್ಪತ್ರೆಗಳ ಆಡಳಿತ ಮಂಡಳಿ ಸರ್ಕಾರಿ ಆದೇಶಕ್ಕೆ ಕಿಮ್ಮತ್ತು ನೀಡುತ್ತಿಲ್ಲ ಎಂಬ ಆರೋಪ ಕೇಳಿ ಬಂದಿದೆ.

ನಗರದಲ್ಲಿ ಶೇ.90ರಷ್ಟು ಖಾಸಗಿ ಆಸ್ಪತ್ರೆಗಳ ಒಪಿಡಿಗಳು ಬಂದ್ ಆಗಿವೆ. ಒಪಿಡಿ ಬಂದ್ ಇರುವುದರಿಂದ ಹೊರ ರೋಗಿಗಳು ಪರದಾಡುವ ಸ್ಥಿತಿ‌ ನಿರ್ಮಾಣವಾಗಿದೆ.

ಹುಬ್ಬಳ್ಳಿ ಖಾಸಗಿ ಆಸ್ಪತ್ರೆಗಳ ಒಪಿಡಿಗಳ ದೃಶ್ಯ..

ಖಾಸಗಿ ಆಸ್ಪತ್ರೆಗಳಿಂದ‌ ಸೂಕ್ತ ಚಿಕಿತ್ಸೆ ಸಿಗದೆ ಮನೆ ಮದ್ದಿಗೆ ಜನ ಮುಂದಾಗಿದ್ದಾರೆ. ಕೇವಲ ತುರ್ತು ಪರಿಸ್ಥಿತಿಯಲ್ಲಿ ಮಾತ್ರ ಚಿಕಿತ್ಸೆ ನೀಡಲಾಗುತ್ತಿದೆ. ಜ್ವರ, ಕೆಮ್ಮು, ನೆಗಡಿ, ಮಧುಮೇಹ, ಅಧಿಕ ರಕ್ತದೊತ್ತಡ, ಮಂಡಿನೋವು ಸೇರಿ ಇನ್ನಿತರ ಸಮಸ್ಯೆಗಳಿಗೆ‌ ಚಿಕಿತ್ಸೆ ಸಿಗದೆ ರೋಗಿಗಳು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ABOUT THE AUTHOR

...view details