ಕರ್ನಾಟಕ

karnataka

ETV Bharat / state

ಸರ್ಕಾರದ ವಿರುದ್ಧ ಅನುದಾನ ರಹಿತ ಖಾಸಗಿ ಶಾಲಾಭಿವೃದ್ಧಿ ಸಂಸ್ಥೆಗಳ ಧರಣಿ - ಅನುದಾನ ರಹಿತ ಖಾಸಗಿ ಶಾಲಾ ಅಭಿವೃದ್ಧಿ ಸಂಸ್ಥೆ ಧರಣಿ

ಇಂದು ನಗರದ ಸಾರ್ವಜನಿಕ ಶಿಕ್ಷಣ ಇಲಾಖೆ ಕಚೇರಿ ಎದುರು ಅನುದಾನ ರಹಿತ ಖಾಸಗಿ ಶಾಲಾ ಅಭಿವೃದ್ಧಿ ಸಂಸ್ಥೆಗಳು ಒಂದು ದಿನದ ಧರಣಿ ನಡೆಸಿದವು.

ಅನುದಾನ ರಹಿತ ಖಾಸಗಿ ಶಾಲಾ ಅಭಿವೃದ್ಧಿ ಸಂಸ್ಥೆ ನೇತೃತ್ವದಲ್ಲಿ ಧರಣಿ
Private School Development Agency protest

By

Published : Dec 2, 2020, 3:32 PM IST

ಧಾರವಾಡ:ರಾಜ್ಯ ಸರ್ಕಾರದ ವಿರುದ್ಧ ಅನುದಾನ ರಹಿತ ಖಾಸಗಿ ಶಾಲಾ ಸಂಸ್ಥೆಗಳು ನಗರದ ಸಾರ್ವಜನಿಕ ಶಿಕ್ಷಣ ಇಲಾಖೆ ಕಚೇರಿ ಎದುರು ಸಾಂಕೇತಿಕ ಧರಣಿ ಹಮ್ಮಿಕೊಂಡಿದ್ದವು.

ಅನುದಾನ ರಹಿತ ಖಾಸಗಿ ಶಾಲಾ ಅಭಿವೃದ್ಧಿ ಸಂಸ್ಥೆಗಳ ನೇತೃತ್ವದಲ್ಲಿ ಧರಣಿ

ಅನುದಾನ ರಹಿತ ಖಾಸಗಿ ಶಾಲಾ ಅಭಿವೃದ್ಧಿ ಸಂಸ್ಥೆಗಳ ನೇತೃತ್ವದಲ್ಲಿ ಈ ಧರಣಿ ನಡೆಸಲಾಯಿತು. ಬಳಿಕ ಪ್ರತಿಭಟನಾಕಾರರು ಈ ಕುರಿತಂತೆ ಜಿಲ್ಲಾಧಿಕಾರಿ ನಿತೇಶ್​ ಪಾಟೀಲ್ ಅವರಿಗೆ ಮನವಿ ಸಲ್ಲಿಸಿದರು.

ರಾಜ್ಯದಲ್ಲಿ ಶೇ.60 ರಷ್ಟು ಖಾಸಗಿ ಶಾಲೆಗಳು ಮಕ್ಕಳಿಗೆ ಶಿಕ್ಷಣವನ್ನು ನೀಡುತ್ತಿವೆ. ಆದರೆ ಸರ್ಕಾರ ಖಾಸಗಿ ಶಾಲೆಗಳನ್ನು ಕಡೆಗಣಿಸುತ್ತಿದೆ. ಈ ಸಮಯದಲ್ಲಿ ಶಾಲೆಗಳನ್ನು ಮೇಲೆತ್ತುವ ಪ್ರಯತ್ನ ಮಾಡಬೇಕು. ಶಿಕ್ಷಣ ಸಚಿವರು ದಿನಕ್ಕೊಂದು ಹೇಳಿಕೆ ನೀಡುವ ಮೂಲಕ ಪಾಲಕರಲ್ಲಿ ಗೊಂದಲ ಉಂಟುಮಾಡುತ್ತಿದ್ದಾರೆ. ಮೊದಲು ಅವರು ನಿಯಮಗಳನ್ನು ತಿಳಿದುಕೊಳ್ಳಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

For All Latest Updates

ABOUT THE AUTHOR

...view details