ಹುಬ್ಬಳ್ಳಿ:ಕನ್ನಡ ಧ್ವಜವನ್ನು ಸುಟ್ಟು ಹಾಕಿದ ಮಹಾರಾಷ್ಟ್ರ ಶಿವಸೇನಾ ಕಾರ್ಯಕರ್ತರ ವಿರುದ್ಧ ಕ್ರಮಕ್ಕೆ ಮುಂದಾಗದ ಸರ್ಕಾರದ ವಿರುದ್ಧ ಕನ್ನಡಪರ ಸಂಘಟನೆಗಳು ಆಕ್ರೋಶ ಹೊರಹಾಕಿವೆ. ಈ ಹಿನ್ನೆಲೆ ನಗರದ ಸಂಗೊಳ್ಳಿರಾಯಣ್ಣ ವೃತದಲ್ಲಿ ಮಾಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಅವರ ಭಾವಚಿತ್ರಕ್ಕೆ ಬೆಂಕಿ ಹಚ್ಚುವ ಮೂಲಕ ವಿವಿಧ ಸಂಘಟನೆಗಳು ಆಕ್ರೋಶ ಹೊರಹಾಕಿವೆ.
ನಾಡಧ್ವಜಕ್ಕೆ ಬೆಂಕಿ ಹಚ್ಚಿದ ಪ್ರಕರಣ: ಮಹಾ ಸಿಎಂ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ವಿವಿಧ ಸಂಘಟನೆಗಳ ಆಕ್ರೋಶ - ಮಹಾರಾಷ್ಟ್ರ ಸಿಎಂ ಭಾವಚಿತ್ರಕ್ಕೆ ಬೆಂಕಿ ಹಚ್ಚಿದ ವಿವಿಧ ಸಂಘಟನೆಗಳು
ಮಹಾರಾಷ್ಟ್ರದಲ್ಲಿ ಕನ್ನಡ ಧ್ವಜ ಸುಟ್ಟು ಹಾಕಿರುವ ಪ್ರಕರಣ ಸಂಬಂಧ ಹುಬ್ಬಳ್ಳಿಯಲ್ಲಿ ವಿವಿಧ ಸಂಘಟನೆಗಳು ಆಕ್ರೋಶ ಹೊರಹಾಕಿವೆ. ಸಿಎಂ ಉದ್ಧವ್ ಠಾಕ್ರೆ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಪುಂಡರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.
ಮಹಾ ಸಿಎಂ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ವಿವಿಧ ಸಂಘಟನೆಗಳ ಆಕ್ರೋಶ
ಕರ್ನಾಟಕ ಗಡಿ ಭಾಗದ ವಿಷಯವನ್ನು ಇಟ್ಟುಕೊಂಡು ಹಲವು ವರ್ಷಗಳಿಂದ ಶಿವಸೇನೆ ಕನ್ನಡಿಗರಿಗೆ ಅಪಮಾನ ಹಾಗೂ ನಾಡದ್ರೋಹ ಕೆಲಸ ಮಾಡುತ್ತಿದ್ದಾರೆ. ಮತ್ತೆ ಈಗ ಕನ್ನಡ ಭಾವುಟವನ್ನು ಸುಟ್ಟು ಹಾಕಿ ಪುಂಡಾಟ ಮೆರೆದಿದ್ದಾರೆ. ಕೂಡಲೇ ಇವರನ್ನು ಬಂಧಿಸಿ ಸರ್ಕಾರ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದ್ದು, ಇಲ್ಲದಿದ್ದರೆ ಮಹಾರಾಷ್ಟ್ರ ಸರ್ಕಾರದ ವಿರುದ್ಧ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಇದನ್ನೂ ಓದಿ:ಕನ್ನಡ ಧ್ವಜ ಸುಟ್ಟ ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳುವಂತೆ ಮಹಾರಾಷ್ಟ್ರ ಸಿಎಂಗೆ ಸಿದ್ದರಾಮಯ್ಯ ಒತ್ತಾಯ