ಹುಬ್ಬಳ್ಳಿ: ಪಾಕಿಸ್ತಾನ ಪರ ಘೋಷಣೆ ಕೂಗಿದ ಮೂವರು ವಿದ್ಯಾರ್ಥಿಗಳಿಗೆ ಜಾಮೀನು ನೀಡಿರುವುದನ್ನು ಮರು ತನಿಖೆ ಮಾಡಬೇಕು ಎಂದು ವಿವಿಧ ಕನ್ನಡ ಪರ ಸಂಘಟನೆಗಳು ಆಗ್ರಹಿಸಿವೆ.
ಪಾಕ್ ಪರ ಘೋಷಣೆ ಕೂಗಿದ್ದ ವಿದ್ಯಾರ್ಥಿಗಳಿಗೆ ಜಾಮೀನು: ಮರು ತನಿಖೆಗೆ ಆಗ್ರಹ - ಹುಬ್ಬಳ್ಳಿಯಲ್ಲಿ ಕನ್ನಡ ಪರ ಸಂಘಟನೆಗಳ ಪ್ರತಿಭಟನೆ
ಹುಬ್ಬಳ್ಳಿಯಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಮೂವರು ವಿದ್ಯಾರ್ಥಿಗಳಿಗೆ ಜಾಮೀನು ನೀಡಿರುವುದನ್ನು ಮರು ತನಿಖೆ ಮಾಡಬೇಕು ಎಂದು ವಿವಿಧ ಕನ್ನಡ ಪರ ಸಂಘಟನೆಗಳು ಆಗ್ರಹಿಸಿವೆ.
ಕನ್ನಡ ಪರ ಸಂಘಟನೆಗಳ ಆಗ್ರಹ
ನಗರದ ಮಿನಿ ವಿಧಾನಸೌಧದ ಎದುರು ಪ್ರತಿಭಟನೆ ನಡೆಸಿದ ಕನ್ನಡ ಪರ ಕಾರ್ಯಕರ್ತರು ಕೂಡಲೇ ಆರೋಪಿಗಳನ್ನು ಬಂಧಿಸಬೇಕು ಎಂದು ಪ್ರತಿಭಟನೆ ನಡೆಸಿದರು.
ಪಾಕಿಸ್ತಾನದ ಪರ ಘೋಷಣೆ ಕೂಗಿ ದೇಶಕ್ಕೆ ದ್ರೋಹ ಮಾಡಿದ್ದು, ಭಾರತೀಯರ ಅಸಮಾಧಾನಕ್ಕೆ ಕಾರಣವಾಗಿದೆ. ಕೂಡಲೇ ಜಾಮೀನು ನೀಡಿ ಬಿಡುಗಡೆ ಮಾಡಿರುವವರನ್ನು ಬಂಧಿಸಿ ತಕ್ಕ ಶಿಕ್ಷೆ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.