ಹುಬ್ಬಳ್ಳಿ : ಪಾಕಿಸ್ತಾನದ ಪರ ಘೋಷಣೆ ಕೂಗಿದ್ದ ಹುಬ್ಬಳ್ಳಿಯ ಕೆಎಲ್ಇ ಕಾಲೇಜಿನ ಕಾಶ್ಮೀರ ಮೂಲದ ಮೂವರು ವಿದ್ಯಾರ್ಥಿಗಳು ಇಂದು ಹುಬ್ಬಳ್ಳಿಯ 5ನೇ ಹೆಚ್ಚುವರಿ ಮತ್ತು ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ಹಾಜರಾಗಿದ್ದರು.
ಕೋರ್ಟ್ ಸಮನ್ಸ್ ನೀಡಿದ ಹಿನ್ನೆಲೆ ಇಂದು ಹಾಜರಾಗಿದ್ದ ವಿದ್ಯಾರ್ಥಿಗಳು, ಪೊಲೀಸ್ ಬಿಗಿ ಭದ್ರತೆಯಲ್ಲಿ ಮೂವರು ವಿದ್ಯಾರ್ಥಿಗಳಾದ ಅಮೀರ್, ಬಾಸಿತ್ ಹಾಗೂ ತಾಲೀಬ್ನನ್ನು ಕೋರ್ಟ್ಗೆ ಹಾಜರು ಪಡಿಸಲಾಯಿತು. ವಿಚಾರಣೆ ನಡೆಸಿದ ಹುಬ್ಬಳ್ಳಿಯ 5ನೇ ಹೆಚ್ಚುವರಿ ಮತ್ತು ಜಿಲ್ಲಾ ಸತ್ರ ನ್ಯಾಯಾಲಯ ಮುಂದಿನ ವಿಚಾರಣೆಯನ್ನ ಮಾರ್ಚ್ 10ಕ್ಕೆ ಮುಂದೂಡಿ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.