ಹುಬ್ಬಳ್ಳಿ:ನಗರದ ಕೆಎಲ್ಇ ಕಾಲೇಜಿನಲ್ಲಿ ಪಾಕ್ ಪರ ಘೋಷಣೆ ಕೂಗಿದ ಮೂವರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದೆ.
ಪಾಕ್ ಪರ ಘೋಷಣೆ ಪ್ರಕರಣ: ಆರೋಪಿಗಳಿಗೆ ಮತ್ತೆ ನ್ಯಾಯಾಂಗ ಬಂಧನ - ಪಾಕ್ ಪರ ಘೋಷಣೆ ಪ್ರಕರಣ
ಪಾಕ್ ಪರ ಘೋಷಣೆ ಕೂಗಿದ ವಿದ್ಯಾರ್ಥಿಗಳ ತನಿಖೆ ಮುಂದುವರೆದಿದ್ದು, ನ್ಯಾಯಾಧೀಶರು ಆರೋಪಿಗಳ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ್ದಾರೆಂದು ಹುಬ್ಬಳ್ಳಿ- ಧಾರವಾಡ ಪೊಲೀಸ್ ಆಯುಕ್ತ ಆರ್. ದಿಲೀಪ್ ಹೇಳಿದ್ದಾರೆ.
ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ವಿದ್ಯಾರ್ಥಿಗಳನ್ನು ಭಾನುವಾರ ಸಿಆರ್ಪಿಸಿ 169 ಬಾಂಡ್ ಮೇಲೆ ಗೋಕುಲ್ ರೋಡ್ ಠಾಣೆ ಪೊಲೀಸರು ಬಿಡುಗಡೆ ಮಾಡಿದ್ದರು. ಇದನ್ನು ಖಂಡಿಸಿ ಭಾನುವಾರ ರಾತ್ರಿ ಭಜರಂಗದಳ ಸೇರಿದಂತೆ ವಿವಿಧ ಹಿಂದೂಪರ ಸಂಘಟನೆಗಳು ಗೋಕುಲ್ ರೋಡ್ ಠಾಣೆ ಎದುರು ಪ್ರತಿಭಟನೆ ನಡೆಸಿ ಪೊಲೀಸ್ ಕಮೀಷನರ್ಗೆ ಮುತ್ತಿಗೆ ಹಾಕಿ ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿದ್ದರು.
ಪರಿಸ್ಥಿತಿ ಕೈಮೀರಿರುವುದನ್ನು ಅರಿತು ರಾತ್ರೋರಾತ್ರಿ ಮತ್ತೆ ಕಾಶ್ಮೀರಿ ಮೂಲದ ಅಮಿರ್, ಬಾಸಿತ್, ತಾಲಿಬ್ ಈ ಮೂವರನ್ನ ಮತ್ತೆ ಬಂಧಿಸಿ ನಿನ್ನೆ ರಾತ್ರಿಯೇ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ. ನ್ಯಾಯಾಧೀಶರು ಆರೋಪಿಗಳ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ್ದಾರೆಂದು ಹು- ಧಾ ಪೊಲೀಸ್ ಆರ್.ದಿಲೀಪ್ ಈಟಿವಿ ಭಾರತಕ್ಕೆ ಸ್ಪಷ್ಟಪಡಿಸಿದ್ದಾರೆ.