ಹುಬ್ಬಳ್ಳಿ : ಪಾಕಿಸ್ತಾನ ಪರ ಝಿಂದಾಬಾದ್ ಘೋಷಣೆ ಕೂಗಿದ ಪ್ರಕರಣದಲ್ಲಿನಿನ್ನೆ ಬಂಧಿಸಲಾಗಿದ್ದ ಕೆಎಲ್ಐ ಕಾಲೇಜಿನ ಮೂವರು ಕಾಶ್ಮೀರಿ ವಿದ್ಯಾರ್ಥಿಗಳನ್ನು ಬಿಡುಗಡೆ ಮಾಡಲಾಗಿದೆ.
ಪಾಕಿಸ್ತಾನ ಪರ ಘೋಷಣೆ ಕೂಗಿದ ಪ್ರಕರಣ : ಬಂಧಿತ ವಿದ್ಯಾರ್ಥಿಗಳು ಬಿಡುಗಡೆ
ಪಾಕಿಸ್ತಾನ ಪರ ಜಿಂದಾಬಾದ್ ಘೋಷಣೆ ಕೂಗಿದ ಪ್ರಕರಣದಲ್ಲಿ ನಿನ್ನೆ ಬಂಧಿಸಲಾಗಿದ್ದ ಕೆಎಲ್ಐ ಕಾಲೇಜಿನ ಮೂವರು ಕಾಶ್ಮೀರಿ ವಿದ್ಯಾರ್ಥಿಗಳನ್ನು ಬಿಡುಗಡೆ ಮಾಡಲಾಗಿದೆ.
ಬಂಧಿತ ಇಂಜಿನಿಯರಿಂಗ್ ವಿದ್ಯಾರ್ಥಿಗಳಾದ ಅಮಿರ್, ತಾಲೀಬ್, ಬಾಸಿತ್ನನ್ನು ಸಿಆರ್ಪಿಸಿ ಕಲಂ 169 ರಡಿ ಬಾಂಡ್ ಮೇಲೆ ನಗರದ ಗೋಕುಲ್ ರೋಡ್ ಠಾಣೆ ಪೊಲೀಸರು ಬಿಡುಗಡೆ ಮಾಡಿದ್ದಾರೆ. ಬಿಡುಗಡೆ ವೇಳೆ ಪೊಲೀಸರ ವಿಚಾರಣೆಗೆ ಸಹಕಾರ ನೀಡುವಂತೆ ವಿದ್ಯಾರ್ಥಿಗಳು ಮತ್ತು ಕಾಲೇಜು ಆಡಳಿತ ಮಂಡಳಿಯಿಂದ ಬಾಂಡ್ ಪತ್ರ ಬರೆಸಿಕೊಳ್ಳಲಾಗಿದೆ ಎಂದು ಹು-ಧಾ ಪೊಲೀಸ್ ಆಯುಕ್ತ ಆರ್ ದಿಲೀಪ್ ಸ್ಪಷ್ಟಪಡಿಸಿದ್ದಾರೆ.
ವಿದ್ಯಾರ್ಥಿಗಳು ಬೆಳಗಾವಿಗೆ ಶಿಫ್ಟ್..: ಇನ್ನು ಮೂವರು ವಿದ್ಯಾರ್ಥಿಗಳನ್ನು ಬೆಳಗಾವಿಗೆ ಶಿಫ್ಟ್ ಮಾಡಲಾಗಿದೆ. ಕೆಎಲ್ಇ ಕಾಲೇಜು ಆಡಳಿತ ಮಂಡಳಿ ವಾಹನದಲ್ಲಿಯೇ ಶಿಫ್ಟ್ ಮಾಡಲಾಗಿದ್ದು, ಮತ್ತಷ್ಟು ಅನುಮಾನಗಳನ್ನು ಹುಟ್ಟು ಹಾಕಿದೆ.