ಹುಬ್ಬಳ್ಳಿ:ಪಾಕಿಸ್ತಾನ ಪರ ಘೋಷಣೆ ಕೂಗಿದ ನಗರದ ಕೆಎಲ್‌ಇ ಇಂಜಿನಿಯರಿಂಗ್ ಕಾಲೇಜಿನ ಮೂವರು ವಿದ್ಯಾರ್ಥಿಗಳನ್ನು ಹಿಂಡಲಗಾ ಕಾರಾಗೃಹಕ್ಕೆ ಶಿಫ್ಟ್ ಮಾಡಲಾಗಿದೆ.
ಪಾಕ್ ಪರ ಘೋಷಣೆ ಪ್ರಕರಣ: ಆರೋಪಿಗಳನ್ನ ಹಿಂಡಲಗಾ ಕಾರಾಗೃಹಕ್ಕೆ ಶಿಪ್ಟ್ ನಿನ್ನೆ 3ನೇ ಜೆ ಎಂಎಫ್ಸಿ ಕೋರ್ಟ್ಗೆ ಹಾಜರುಪಡಿಸಲಾಗಿತ್ತು. ಆಗ ಅಮಿರ್ ,ಬಾಸಿತ್, ತಾಲಿಬ್ ಅವರನ್ನು ಮಾ. 2ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಬಳಿಕ ನಗರದ ಉಪ ಕಾರಾಗೃಹಕ್ಕೆ ಕಳುಹಿಸಿಕೊಡಲಾಗಿತ್ತು.
ನಿನ್ನೆ ಕೋರ್ಟ್ ನಿಂದ ಜೈಲಿಗೆ ಕಳುಹಿಸುವಾಗ ಕೋರ್ಟ್ ಆವರಣದಲ್ಲಿ ಹೈಡ್ರಾಮಾ ಸೃಷ್ಟಿಯಾಗಿತ್ತು. ಹಿಂದೂಪರ ಸಂಘಟನೆ ಕಾರ್ಯಕರ್ತರು ಆರೋಪಿಗಳ ಮೇಲೆ ಹಲ್ಲೆ ನಡೆಸಿದ್ದರು. ಹೀಗಾಗಿ ಜೈಲಿನಲ್ಲಿಯೂ ತಮ್ಮ ಮೇಲೆ ಹಲ್ಲೆ ನಡೆಯಬಹುದು ಎಂಬ ಆತಂಕದಿಂದ ರಾತ್ರಿಯಿಡೀ ನಿದ್ದೆ ಮಾಡದೇ ಭಯದಿಂದ ಕುಳಿತುಕೊಂಡಿದ್ದರು ಎನ್ನಲಾಗಿದೆ.
ಹೀಗಾಗಿ ಇಂದು ಬೆಳಗ್ಗೆ ಹುಬ್ಬಳ್ಳಿಯ ಉಪ ಕಾರಾಗೃಹ ದಿಂದ ಬೆಳಗಾವಿಯ ಹಿಂಡಲಗಾ ಕಾರಾಗೃಹಕ್ಕೆ ಆರೋಪಿಗಳನ್ನು ಶಿಫ್ಟ್ ಮಾಡಲಾಗಿದೆ.ಜೈಲಿನ ಅಂದೇರಿ ಸೆಲ್ನಲ್ಲಿ ಮೂವರು ಕಾಶ್ಮೀರ ವಿದ್ಯಾರ್ಥಿಗಳನ್ನು ಇರಿಸಲಾಗಿದೆ. ಬೇರೆ ಕೈದಿಗಳಿಂದ ಹಲ್ಲೆ ಭೀತಿ ಹಿನ್ನೆಲೆಯಲ್ಲಿ ಮೂವರು ಆರೋಪಿಗಳನ್ನು ಜೈಲಿನ ಸಿಬ್ಬಂದಿ, ಒಂದೇ ಸೆಲ್ನಲ್ಲಿ ಇರಿಸಿದ್ದಾರೆ..