ಧಾರವಾಡ:ಆಗಸ್ಟ್ 22 ರಿಂದ ಸೆ.4 ರವರೆಗೆ ಗಣೇಶ ಹಬ್ಬದ ಆಚರಣೆ ಪ್ರಯುಕ್ತ ಜಿಲ್ಲೆಯ ನಗರ ಮತ್ತು ಗ್ರಾಮಗಳಲ್ಲಿ ಬೇರೆ ಬೇರೆ ದಿನಗಳಂದು ಗಣೇಶ ವಿಗ್ರಹಗಳ ನಿಮಜ್ಜನ ನಡೆಯುವ ಹಿನ್ನೆಲೆ ಮುಂಜಾಗೃತ ಕ್ರಮವಾಗಿ ಮದ್ಯಪಾನ, ಮದ್ಯಮಾರಾಟ ಹಾಗೂ ಮದ್ಯ ಸಾಗಾಣಿಕೆಯನ್ನು ನಿಷೇಧಿಸಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಆದೇಶ ಹೊರಡಿಸಿದ್ದಾರೆ.
ಆ.22 ರಿಂದ ಮದ್ಯ ಮಾರಾಟ ನಿಷೇಧ: ಧಾರವಾಡ ಡಿಸಿ ನಿತೇಶ್ ಪಾಟೀಲ ಆದೇಶ - ಜಿಲ್ಲಾಧಿಕಾರಿ ನಿತೇಶ್ ಪಾಟೀಲ
ಆ.22 ರಿಂದ ಮದ್ಯಪಾನ, ಮದ್ಯಮಾರಾಟ ಹಾಗೂ ಮದ್ಯ ಸಾಗಾಣಿಕೆಯನ್ನು ನಿಷೇಧಿಸಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಆದೇಶ ಹೊರಡಿಸಿದ್ದಾರೆ.
ಗಣೇಶ ಹಬ್ಬಕ್ಕೆ ಸಂಬಂಧಿಸಿದಂತೆ ಕರ್ನಾಟಕ ಅಬಕಾರಿ ಕಾಯ್ದೆ 1965ರ ಕಲಂ 21(1) ಕಾಯ್ದೆಯಡಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಿಕೊಂಡು ಮುಂಜಾಗೃತ ಕ್ರಮವಾಗಿ ಈ ಆದೇಶ ಹೊರಡಿಸಲಾಗಿದೆ. ಸಮಾರಂಭ, ಸಂಗೀತ, ನೃತ್ಯ, ಮುಂತಾದ ಮನರಂಜನಾ ಕಾರ್ಯಕ್ರಮಗಳನ್ನು ನಿರ್ಬಂಧಿಸಲಾಗಿದೆ.
ಗಣೇಶ ಮೂರ್ತಿಯನ್ನು ತಮ್ಮ ಮನೆಯ ಆವರಣದಲ್ಲಿ, ನೀರಿನ ಬ್ಯಾರಲ್, ಬಕೆಟ್ಗಳಲ್ಲಿ ನಿಮಜ್ಜನ ಮಾಡಬೇಕು. ಯಾವುದೇ ರೀತಿಯಾಗಿ ಜನ ಸಂದಣಿ ಉಂಟು ಮಾಡಬಾರದು. ಭಕ್ತರಿಗೆ ಸ್ಯಾನಿಟೈಸರ್, ಮಾಸ್ಕ್ ಧರಿಸಲು ಸೂಚಿಸಬೇಕು. ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಪರಿಸರ ಸ್ನೇಹಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಲು ಡಿಸಿ ಮನವಿ ಮಾಡಿದ್ದಾರೆ.