ಧಾರವಾಡ:ಆಸ್ತಿ ವಿಷಯಕ್ಕೆ ಸಂಬಂಧಿಸಿದಂತೆ ಮಹಿಳೆ ಮೇಲೆ ಕಿಡಿಗೇಡಿಗಳು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿರುವ ಘಟನೆ ತಾಲೂಕಿನ ನರೇಂದ್ರ ಗ್ರಾಮದಲ್ಲಿ ನಡೆದಿದೆ.
ಆಸ್ತಿ ಕಲಹ: ಮಹಿಳೆ ಮೇಲೆ ಹಲ್ಲೆ ನಡೆಸಿದ ಕಿಡಿಗೇಡಿಗಳು - Assaulter attacked on a woman
ಆಸ್ತಿ ವಿಷಯಕ್ಕೆ ಸಂಬಂಧಿಸಿದಂತೆ ಮಹಿಳೆ ಮೇಲೆ ಕಿಡಿಗೇಡಿಗಳು ಹಲ್ಲೆ ನಡೆಸಿರುವ ಘಟನೆ ಧಾರವಾಡದಲ್ಲಿ ನಡೆದಿದೆ.
ಮಹಿಳೆ ಮೇಲೆ ಹಲ್ಲೆ ನಡೆಸಿದ ಕಿಡಿಗೇಡಿಗಳು
ಮಾಧುಶ್ರಿ ಗೌಡರ ಹಲ್ಲೆಗೊಳಗಾದ ಮಹಿಳೆ. ಘಟನೆಯ ಕುರಿತು ಮಾಹಿತಿ ನೀಡಿರುವ ಮಾಧುಶ್ರೀ, "ಆಸ್ತಿ ವಿಷಯಕ್ಕೆ ಸಂಬಂಧಿಸಿದಂತೆ ನಿನ್ನೆ ರಾತ್ರಿ ನಮ್ಮ ವೈರಿಗಳು ಮಚ್ಚು ಹಾಗೂ ದೊಣ್ಣೆಗಳಿಂದ ಹಲ್ಲೆ ಮಾಡಿದ್ದಾರೆ. ನನ್ನ ಮಗನ ಮೇಲೂ ಹಲ್ಲೆ ನಡೆಸಿದ್ದಾರೆ" ಎಂದು ಹೇಳಿದ್ದಾರೆ.
ಸದ್ಯ ಮಾಧುಶ್ರೀ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.