ಕರ್ನಾಟಕ

karnataka

ETV Bharat / state

ಕ್ವಾರಂಟೈನ್​ ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ: ಹು-ಧಾ ಪೊಲೀಸ್ ಆಯುಕ್ತ ಎಚ್ಚರಿಕೆ

ಜಿಯೋ ಫೆನ್ಸಿಂಗ್ ವ್ಯಾಪ್ತಿಯಿಂದ ಹೊರ ಬರುವವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಪೊಲೀಸ್ ಆಯುಕ್ತ ಆರ್.ದಿಲೀಪ್, ಎಲ್ಲಾ ಅಧೀನ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Police Commissioner
ಪೊಲೀಸ್ ಆಯುಕ್ತ ಆರ್.ದಿಲೀಪ್

By

Published : May 16, 2020, 11:32 AM IST

ಹುಬ್ಬಳ್ಳಿ: ಹೋಮ್ ಕ್ವಾರಂಟೈನ್​ನಲ್ಲಿ ಒಳಪಟ್ಟಿರುವ ಎಲ್ಲಾ ವ್ಯಕ್ತಿಗಳನ್ನು ಆಧುನಿಕ ತಂತ್ರಜ್ಞಾನ ಬಳಸಿ ಜಿಯೋ ಫೆನ್ಸಿಂಗ್ ಮೂಲಕ ಕಣ್ಗಾವಲಿನಲ್ಲಿ ಇರಿಸಲಾಗಿದೆ.

ಜಿಯೋ ಫೆನ್ಸಿಂಗ್ ವ್ಯಾಪ್ತಿಯಿಂದ ಹೊರ ಬರುವವರ ಮಾಹಿತಿ ತ್ವರಿತವಾಗಿ ಲಭ್ಯವಾಗುತ್ತಿದೆ. ಅಂತಹವರ ವಿರುದ್ಧ ಸಾಂಕ್ರಾಮಿಕ ರೋಗಗಳ ತಡೆ ಕಾಯ್ದೆ 1897 ಹಾಗೂ ಕರ್ನಾಟಕ ಸಾಂಕ್ರಾಮಿಕ ರೋಗಗಳ ತಡೆ (ಕೋವಿಡ್) ಕಾಯ್ದೆಯಡಿ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಪೊಲೀಸ್ ಆಯುಕ್ತ ಆರ್.ದಿಲೀಪ್ ಎಲ್ಲಾ ಅಧೀನ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಇನ್ನು ಕ್ವಾರಂಟೈನ್ ಉಲ್ಲಂಘಿಸಿ ಮನೆಯಿಂದ ಹೊರ ಬರುವ ನಾಗರಿಕರ ಕುರಿತು ಅವರ ನೆರೆಹೊರೆಯವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯೊಂದಿಗೆ ಕೈಜೋಡಿಸಿ ಮಾಹಿತಿ ಸಂಗ್ರಹಿಸಿ ನಿಯಂತ್ರಿಸಬೇಕು ಎಂದು ತಿಳಿಸಿದ್ದಾರೆ.

ABOUT THE AUTHOR

...view details