ಹುಬ್ಬಳ್ಳಿ:ಮಸಾಜ್ ಪಾರ್ಲರ್ಗಳ ಹೆಸರಿನಲ್ಲಿ ವೈಶಾವಾಟಿಕೆ ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ನಗರದ ಹಲವು ಕಡೆ ಪೊಲೀಸರು ದಾಳಿ ನಡೆಸಿದ್ದಾರೆ. ಮಸಾಜ್ ಪಾರ್ಲರ್ ಹೆಸರಿನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ, ಇಬ್ಬರು ಪಾರ್ಲರ್ ಮಾಲೀಕರನ್ನು ಬಂಧಿಸಲಾಗಿದೆ.
ಮಸಾಜ್ ಪಾರ್ಲರ್ ಹೆಸರಿನಲ್ಲಿ ವೇಶ್ಯಾವಾಟಿಕೆ: ಇಬ್ಬರ ಬಂಧನ - gokul road police station
ನಗರದ ಹಲವು ಕಡೆ ಪೊಲೀಸರು ದಾಳಿ ನಡೆಸಿದ್ದಾರೆ. ಮಸಾಜ್ ಪಾರ್ಲರ್ ಹೆಸರಿನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದರು ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಇಬ್ಬರು ಪಾರ್ಲರ್ ಮಾಲೀಕರನ್ನು ಬಂಧಿಸಲಾಗಿದೆ.
![ಮಸಾಜ್ ಪಾರ್ಲರ್ ಹೆಸರಿನಲ್ಲಿ ವೇಶ್ಯಾವಾಟಿಕೆ: ಇಬ್ಬರ ಬಂಧನ](https://etvbharatimages.akamaized.net/etvbharat/prod-images/768-512-4294231-thumbnail-3x2-.jpg)
ಸಾಂದರ್ಭಿಕ ಚಿತ್ರ
ಮಸಾಜ್ ಪಾರ್ಲರ್ ಹೆಸರಿನಲ್ಲಿ ವೇಶ್ಯಾವಾಟಿಕೆ
ಪಾರ್ಲರ್ ಮಾಲೀಕರಾದ ಕಾರ್ತಿಕ್ ಶೆಟ್ಟಿ, ಕಿಶನ್ ಬಂಧಿತ ಆರೋಪಿಗಳು. ಪ್ರಕರಣದಲ್ಲಿ ಐವರು ಮಹಿಳೆಯರನ್ನು ರಕ್ಷಣೆ ಮಾಡಲಾಗಿದೆ. ಹುಬ್ಬಳ್ಳಿಯ ಉಪನಗರ ಪೊಲೀಸ್ ಠಾಣೆ ಹಾಗೂ ಗೋಕುಲ್ ರೋಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಳಿ ನಡೆಸಲಾಗಿದೆ.
ಕಾನೂನು ಸುವ್ಯವಸ್ಥೆ ಡಿಸಿಪಿ ಎಲ್ ನಾಗೇಶ್ ಹಾಗೂ ಎಸಿಪಿ ಹೆಚ್ ಕೆ ಪಠಾಣ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ಉಪನಗರ ಠಾಣೆ ಹಾಗೂ ಗೋಕುಲ್ ರೋಡ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿವೆ.