ಹುಬ್ಬಳ್ಳಿ:ಡಿಎನ್ಎ ಆಧಾರಿತ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಮುಸ್ಲಿಂ ಹಾಗೂ ಅಲ್ಪಸಂಖ್ಯಾತರ ಸಂಘಟನೆಗಳ ಸಹಯೋಗದಲ್ಲಿಂದು ವಿಜಯ ಗುಂಟ್ರಾಳ ನೇತೃತ್ವದಲ್ಲಿ ಕೇಂದ್ರ ಸರ್ಕಾರಕ್ಕೆ ರಕ್ತದಲ್ಲಿ ಪತ್ರ ಬರೆಯುವ ಮೂಲಕ ನಗರದ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ಹುಬ್ಬಳ್ಳಿ: ಡಿಎನ್ಎ ಆಧಾರಿತ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ರಕ್ತದಲ್ಲಿ ಪತ್ರ ಬರೆದು ಪ್ರತಿಭಟನೆ!
ಡಿಎನ್ಎ ಆಧಾರಿತ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಮುಸ್ಲಿಂ ಹಾಗೂ ಅಲ್ಪಸಂಖ್ಯಾತರ ಸಂಘಟನೆಗಳ ಸಹಯೋಗದಲ್ಲಿಂದು ಕೇಂದ್ರ ಸರ್ಕಾರಕ್ಕೆ ರಕ್ತದಲ್ಲಿ ಪತ್ರ ಬರೆಯುವ ಮೂಲಕ ಪ್ರತಿಭಟನೆ ನಡೆಸಿದರು.
ಸಿಎಎ ಹಾಗೂ ಎನ್ಆರ್ಸಿಗಳು ದೇಶದ ಮುಸ್ಲಿಂ ಹಾಗೂ ಅಲ್ಪಸಂಖ್ಯಾತರ ವಿರೋಧಿ. ಎಷ್ಟು ಮನವಿ ಸಲ್ಲಿಸಿದರೂ ಕೂಡ ಕೇಂದ್ರ ಸರ್ಕಾರ ಸ್ಪಂದಿಸುತ್ತಿಲ್ಲ. ನಮ್ಮ ನೆತ್ತರು ಹರಿಸಿ ಕೇಂದ್ರ ಸರ್ಕಾರಕ್ಕೆ ಎಚ್ಚರಿಸುತ್ತಿದ್ದೇವೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಭಾರತ ದೇಶದ ಮೂಲ ನಿವಾಸಿ ದಲಿತರು, ಆದಿವಾಸಿಗಳು, ಅಲ್ಪಸಂಖ್ಯಾತರು, ಹಿಂದುಳಿದ ಜನಾಂಗವನ್ನು ತೀವ್ರವಾಗಿ ಸಂಕಷ್ಟಕ್ಕೀಡು ಮಾಡಲಿರುವ ಪೌರತ್ವ ತಿದ್ದುಪಡಿಯನ್ನು ದೇಶದ ಕೋಟ್ಯಾಂತರ ಜನ ವಿರೋಧಿಸುತ್ತಿದ್ದಾರೆ. ಆದರೂ ಕೇಂದ್ರ ಬಿಜೆಪಿ ಸರ್ಕಾರ ಕಾನೂನು ಜಾರಿಗೊಳಿಸಿರುವುದು ಖಂಡನೀಯ ಎಂದು ರಕ್ತ ಲಿಖಿತ ಪತ್ರದ ಮೂಲಕ ಅಸಮಾಧಾನ ಹೊರಹಾಕಿದರು. ಪಾಕಿಸ್ತಾನ, ಬಾಂಗ್ಲಾದೇಶ, ಅಪ್ಘಾನಿಸ್ಥಾನದ ಅಲ್ಪಸಂಖ್ಯಾತರ ಮೇಲೆ ನಡೆದಿರುವ ದೌರ್ಜನ್ಯದ ಬಗ್ಗೆ ಕೇಂದ್ರ ಸರ್ಕಾರ ಯಾವುದಾದರೂ ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಧ್ವನಿ ಎತ್ತಿ ಅಂಕಿ-ಅಂಶಗಳನ್ನು ಬಹಿರಂಗಪಡಿಸಲಿ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.