ಹುಬ್ಬಳ್ಳಿ:ಶಿಕ್ಷಕರ ಕಡ್ಡಾಯ ವರ್ಗಾವಣೆ ವಿರೋಧಿಸಿ, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಲಾಗಿದೆ.
ಶಿಕ್ಷಕರ ಕಡ್ಡಾಯ ವರ್ಗಾವಣೆ ವಿರೋಧಿಸಿ ಬೃಹತ್ ಪ್ರತಿಭಟನೆ - undefined
ಕಡ್ಡಾಯ ವರ್ಗಾವಣೆಯನ್ನು ಸರ್ಕಾರ ಕೂಡಲೇ ನಿಲ್ಲಿಸಬೇಕು ಎಂದು ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ಪ್ರತಿಭಟನೆ ಕೈಗೊಳ್ಳಲಾಗಿದೆ.
ನಂತರ ಶಿಕ್ಷಕರು ಮಾತನಾಡಿ ಹುಬ್ಬಳ್ಳಿ ಶಹರ ವಲಯದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರಿಗೆ ಕಡ್ಡಾಯವಾಗಿ ವರ್ಗಾವಣೆ ಮಾಡುತ್ತಿರುವುದು ಅವೈಜ್ಞಾನಿಕವಾಗಿದೆ. ಪತಿ ಪತ್ನಿಯರನ್ನು ಒಂದೆಡೇ ಸೇರಿಸಬೇಕೆಂದು ನಿಯಮ ಹೇಳುತ್ತಿದ್ದು, ಈಗ ವರ್ಗಾವಣೆಯಿಂದ ಅಗಲಿಸುತ್ತಿರುವುದು ಶಿಕ್ಷಕರು ಸಂಕಷ್ಟಕ್ಕೆ ಸಿಲುಕುವಂತ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಕೂಡಲೇ ನ್ಯಾಯ ಸಮ್ಮತವಲ್ಲದ ವರ್ಗಾವಣೆ ಕೈ ಬಿಡಬೇಕು ಎಂದು ಆಗ್ರಹಿಸಿದರು.
ಕರ್ನಾಟಕ ರಾಜ್ಯ ಸಿವಿಲ್ ಸೇವೆ ನಿಯಮಾವಳಿ ಪ್ರಕಾರ ಗ್ರಾಮೀಣ ಸೇವೆ ಕಡ್ಡಾಯ ಎಂಬ ಅರ್ಥ ನೀಡುತ್ತಿತ್ತು ಆದರೇ ಇತ್ತಿಚೀಗೆ ಕಡ್ಡಾಯ ಎಂಬ ಅರ್ಥವನ್ನು ತಿರುಚಿದಂತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ನಿಯಮದ ಪ್ರಕಾರ ಸುಮಾರು (10)-(15 )ವರ್ಷಗಳ ಗ್ರಾಮೀಣ ಸೇವೆ ಸಲ್ಲಿಸಿ ಶಹರಕ್ಕೆ ಬಂದಿರುತ್ತೇವೆ ಮತ್ತೇ ವರ್ಗಾವಣೆಯಿಂದ ಶಿಕ್ಷಕರು ಕಷ್ಟ ಅನುಭವಿಸುವಂತ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.