ಕರ್ನಾಟಕ

karnataka

ETV Bharat / state

ನಿರಾಶ್ರಿತರಿಗೆ ಸ್ಪಂದಿಸುವಂತೆ ಆಗ್ರಹಿಸಿ ಧಾರವಾಡದಲ್ಲಿ ಪ್ರತಿಭಟನೆ - ಇತ್ತೀಚಿನ ಧಾರವಾಡ ಸುದ್ದಿ

ಬರಪೀಡಿತ ನಿರಾಶ್ರಿತರಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸದ ಸರ್ಕಾರದ ವಿರುದ್ಧ ಕರ್ನಾಟಕ ರಾಷ್ಟ್ರ ಸಮಿತಿ ಕಾರ್ಯಕರ್ತರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ನಿರಾಶ್ರಿತರಿಗೆ ಸ್ಪಂದಿಸುವಂತೆ ಆಗ್ರಹಿಸಿ ಧಾರವಾಡದಲ್ಲಿ ಪ್ರತಿಭಟನೆ

By

Published : Oct 6, 2019, 10:54 AM IST

ಧಾರವಾಡ:ಬರಪೀಡಿತ ನಿರಾಶ್ರಿತರಿಗೆ ಸ್ಪಂದಿಸದ ಸರ್ಕಾರವನ್ನು ವಜಾಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ರಾಷ್ಟ್ರ ಸಮಿತಿ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ನಿರಾಶ್ರಿತರಿಗೆ ಸ್ಪಂದಿಸುವಂತೆ ಆಗ್ರಹಿಸಿ ಧಾರವಾಡದಲ್ಲಿ ಪ್ರತಿಭಟನೆ

ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಕಾರ್ಯಕರ್ತರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿ, ಜಿಲ್ಲಾಧಿಕಾರಿಗಳ‌ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು.

ಕಳೆದ ಎರಡು ತಿಂಗಳ ಹಿಂದೆ ಸಂಭವಿಸಿದ ಭೀಕರ ಪ್ರವಾಹಕ್ಕೆ ಉತ್ತರ ಕರ್ನಾಟಕ ತತ್ತರಿಸಿ ಹೋಗಿದೆ. ಅಲ್ಲಿನ‌ ಜನರು ಹಸಿವಿನಿಂದ ಸಾವಿನ ಅಂಚಿನಲ್ಲಿದ್ದು, ನೆರೆ ಸಂತ್ರಸ್ತರಿಗೆ ಸೂಕ್ತ ಪರಿಹಾರ ಕೊಡುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಫಲವಾಗಿವೆಯೆಂದು ಆರೋಪಿಸಿದರು. ಸರ್ಕಾರ ಕೂಡಲೇ ನಿರಾಶ್ರಿತರಿಗೆ ಸ್ಪಂದಿಸಿ ಅವರಿಗೆ ಸೂರು ಹಾಗೂ ದೈನಂದಿನ ಬದುಕಿಗೆ ಸ್ಪಂದಿಸದಿದ್ದರೆ, ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಸಿದರು.

ABOUT THE AUTHOR

...view details