ಹುಬ್ಬಳ್ಳಿ:ಮದ್ಯ ಮಾರಾಟಕ್ಕೆ ಅವಕಾಶ ಖಂಡಿಸಿ ನಗರದ ತಹಶೀಲ್ದಾರ್ ಕಚೇರಿ ಮುಂದೆ ಕಳಸಾ ಬಂಡೂರಿ ಹೋರಾಟ ಸಮಿತಿ ಪ್ರತಿಭಟನೆ ನಡೆಸಿದೆ.
ಮದ್ಯ ಮಾರಾಟ ವಿರೋಧಿಸಿ ಕಳಸಾ ಬಂಡೂರಿ ಹೋರಾಟ ಸಮಿತಿ ಪ್ರತಿಭಟನೆ
ಮದ್ಯ ಮಾರಾಟವನ್ನು ವಿರೋಧಿಸಿ ಕಳಸಾ ಬಂಡೂರಿ ಹೋರಾಟ ಸಮಿತಿಯಿಂದ ಹುಬ್ಬಳ್ಳಿಯಲ್ಲಿ ಪ್ರತಿಭಟನೆ ನಡೆಸಲಾಯಿತು.
ಮದ್ಯ ಮಾರಾಟ ವಿರೋಧಿಸಿ ಪ್ರತಿಭಟನೆ
ಲಾಕ್ಡೌನ್ ನಿಂದ ಜನರು ಆರ್ಥಿಕವಾಗಿ ಸಂಕಷ್ಟಕ್ಕೆ ಇಳಿದಿದ್ದಾರೆ. ಇದರ ನಡುವೆ ಈಗ ರಾಜ್ಯ ಸರ್ಕಾರ ಮದ್ಯ ಮಾರಾಟಕ್ಕೆ ಅವಕಾಶ ನೀಡಿ ಸಾರ್ವಜನಿಕರ ಆರೋಗ್ಯ ಹಾಗೂ ಜೀವನ ಜೊತೆ ಸರ್ಕಾರ ಆಟವಾಡುತ್ತಿದೆ. ಹೀಗಾಗಿ ರಾಜ್ಯ ಸರ್ಕಾರ ಮದ್ಯ ಮಾರಾಟ ಸ್ಥಗಿತಗೊಳಿಸುವದರ ಜೊತೆಗೆ ರಾಜ್ಯದಲ್ಲಿ ಮದ್ಯ ನಿಷೇಧ ಮಾಡುವಂತೆ ಆಗ್ರಹಿಸಿ ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.