ಧಾರವಾಡ : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಎಐಟಿಯುಸಿ ಸಂಘಟನೆ ನೇತೃತ್ವದಲ್ಲಿ ಆಶಾ ಕಾರ್ಯಕರ್ತೆಯರು ಪ್ರತಿಭಟಿಸಿದರು. ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಆಶಾ ಕಾರ್ಯಕರ್ತೆಯರು, ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರಿಂದ ಪ್ರತಿಭಟನೆ - ಧಾರವಾಡ ಡಿಸಿ ಕಚೇರಿ ಮುಂದೆ ಕಾರ್ಯಕರ್ತೆಯರ ಪ್ರತಿಭಟನೆ
ಸರ್ಕಾರ ಕೊಟ್ಟ ಮಾತಿನಂತೆ ನಡೆದುಕೊಳ್ಳಬೇಕು. ಕನಿಷ್ಠ ₹12 ಸಾವಿರ ಗೌರವಧನ ನಿಗದಿ ಮಾಡಬೇಕು..
ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು
ಸರ್ಕಾರ ಕೊಟ್ಟ ಮಾತಿನಂತೆ ನಡೆದುಕೊಳ್ಳಬೇಕು. ಕನಿಷ್ಠ ₹12 ಸಾವಿರ ಗೌರವಧನ ನಿಗದಿ ಮಾಡಬೇಕು. ಕೊರೊನಾ ವಾರಿಯರ್ಸ್ ಆಗಿ ಕೆಲಸ ಮಾಡುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಕೋವಿಡ್ ರಕ್ಷಣಾ ಸಾಮಗ್ರಿಗಳನ್ನು ವಿತರಣೆ ಮಾಡಬೇಕು ಎಂದು ಆಗ್ರಹಿಸಿದರು.