ಕರ್ನಾಟಕ

karnataka

ETV Bharat / state

ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆ ಶುಶ್ರೂಷಕರಿಂದ ಪ್ರತಿಭಟನೆ.. ಕಾರಣ? - ಕಿಮ್ಸ್ ಆಸ್ಪತ್ರೆಯ ಶುಶ್ರೂಷಕರು

ಕಿಮ್ಸ್ ಆಸ್ಪತ್ರೆಯ ಶುಶ್ರೂಷಕರು ಆಸ್ಪತ್ರೆಯ ಎದುರು ಪ್ರತಿಭಟನೆ ನಡೆಸಿ, ಕಿಮ್ಸ್ ಸಿಎಓ ರಾಜೇಶ್ವರಿ ಜೈನಾಪುರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

Protest by nursing staff at Kim's Hospital
ಕಿಮ್ಸ್ ಆಸ್ಪತ್ರೆಯ ಶುಶ್ರೂಷಾ ಸಿಬ್ಬಂದಿಯಿಂದ ಪ್ರತಿಭಟನೆ

By

Published : Jul 22, 2020, 3:34 PM IST

ಹುಬ್ಬಳ್ಳಿ:ಕೊರೊನಾ ವೈರಸ್ ವಿರುದ್ಧ ಹೋರಾಟದಲ್ಲಿ ನಿರಂತರವಾಗಿ ಸೇವೆ ಸಲ್ಲಿಸುತ್ತ ಬಂದಿರುವ ಕಿಮ್ಸ್ ಆಸ್ಪತ್ರೆಯ ಶುಶ್ರೂಷಕರು ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದರು.

ಕೋವಿಡ್ ಕಾರ್ಯ ನಿರ್ವಹಿಸುತ್ತಿರುವ ವೇಳೆ ಪಿಪಿಇ ಕಿಟ್, ಶೌಚಾಲಯ ವ್ಯವಸ್ಥೆ ಸೇರಿದಂತೆ ಮಾಸ್ಕ್​ಗಳನ್ನ ಸರಿಯಾಗಿ ನೀಡುತ್ತಿಲ್ಲ ಎಂದು ಆರೋಪಿಸಿ ಆಕ್ರೋಶ ವ್ಯಕ್ತಪಡಿಸಿದರು.

ಕಿಮ್ಸ್ ಆಸ್ಪತ್ರೆಯ ಶುಶ್ರೂಷಕರಿಂದ ಪ್ರತಿಭಟನೆ

ಬೇಡಿಕೆ ಈಡೇರಿಸಲು ಮನವಿಯನ್ನ ಸಿಇಓಗೆ ಸಲ್ಲಿಸಲು ಹೋದರೆ ನಮ್ಮ ಮೇಲೆಯೇ ದಬ್ಬಾಳಿಕೆ ಮಾಡಿದ್ದಾರೆ. ಅಲ್ಲದೇ ಎಲ್ಲರೂ ರಾಜೀನಾಮೆ ನೀಡಿ ಎಂದು ಹೇಳಿದ್ದಾರೆ ಎಂದು ಶುಶ್ರೂಷಕರು ಕಿಮ್ಸ್ ಸಿಎಓ ರಾಜೇಶ್ವರಿ ಜೈನಾಪುರ ವಿರುದ್ಧ ಪ್ರತಿಭಟನೆ ನಡೆಸಿದರು.

ಸ್ಥಳಕ್ಕೆ ಭೇಟಿ ನೀಡಿದ ಕಿಮ್ಸ್ ನಿರ್ದೇಶಕ ರಾಮಲಿಂಗಪ್ಪ ಅಂಟರತಾನಿ ಅವರು, ನರ್ಸ್​ಗಳ ಬೇಡಿಕೆ ಈಡೇರಿಸುವುದಾಗಿ ಭರವಸೆ ನೀಡಿದರು.

ABOUT THE AUTHOR

...view details