ಧಾರವಾಡ: ಕುರುಬ ಸಮಾಜಕ್ಕೆ ಎಸ್ಟಿ ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಕುರುಬ ಸಮಾಜದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಎಸ್ಟಿ ಮೀಸಲಾತಿಗಾಗಿ ಆಗ್ರಹಿಸಿ ಕುರುಬ ಸಮಾಜದಿಂದ ಪ್ರತಿಭಟನೆ - Protest by shepherd society
ಧಾರವಾಡದ ಜಿಲ್ಲಾಧಿಕಾರಿ ಕಚೇರಿ ಎದುರು ಕುರುಬ ಸಮಾಜಕ್ಕೆ ಎಸ್ಟಿ ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿ ಕುರುಬ ಸಮಾಜದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಕುರುಬ ಸಮಾಜದಿಂದ ಪ್ರತಿಭಟನೆ
ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಕುರುಬ ಸಮಾಜದ ಮುಖಂಡರು, ಪ್ರತಿಭಟನೆಗೆ ನಾಯಿಗಳನ್ನು ತಂದು ವಿನೂತನವಾಗಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಕುರುಬರನ್ನು ಪರಿಶಿಷ್ಟ ಪಂಗಡ ಎಂದು ಘೋಷಿಸಬೇಕು. ಅನರ್ಹ ಶಾಸಕರು ಎಂದು ಕರೆಸಿಕೊಳ್ಳುವ ಹೆಚ್.ವಿಶ್ವನಾಥ್ ಅವರಿಗೆ ಸೂಕ್ತ ಸ್ಥಾನಮಾನ ನೀಡಬೇಕು ಎಂದು ಆಗ್ರಹಿಸಿದರು.
ಹುಬ್ಬಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಗೊಳ್ಳಿ ರಾಯಣ್ಣ ಎಂದು ಹೆಸರು ಇಡಬೇಕು. ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಹಿಂಪಡೆಯಬೇಕು ಎಂದು ಆಗ್ರಹಿಸಿದರು.