ಹುಬ್ಬಳ್ಳಿ: ಹು-ಧಾ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ವಾರ್ಡ್ ನಂ.41ರ ಕೊಳಗೇರಿ ನಿವಾಸಿಗಳಿಗೆ ಹಕ್ಕುಪತ್ರ ವಿತರಿಸುವಂತೆ ಆಗ್ರಹಿಸಿ ಸಮಗ್ರ ಕರ್ನಾಟಕ ರಕ್ಷಣಾ ಸೇನೆಯಿಂದ ಕೊಳಚೆ ನಿರ್ಮೂಲನಾ ಮಂಡಳಿ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಕೊಳಗೇರಿ ನಿವಾಸಿಗಳಿಗೆ ಹಕ್ಕುಪತ್ರ ವಿತರಿಸುವಂತೆ ಆಗ್ರಹಿಸಿ ಪ್ರತಿಭಟನೆ - ಸಮಗ್ರ ಕರ್ನಾಟಕ ರಕ್ಷಣಾ ಸೇನೆ
ಹು-ಧಾ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ವಾರ್ಡ್ ನಂ.41ರ ಕೊಳಗೇರಿ ನಿವಾಸಿಗಳಿಗೆ ಹಕ್ಕುಪತ್ರ ವಿತರಿಸುವಂತೆ ಆಗ್ರಹಿಸಿ ಸಮಗ್ರ ಕರ್ನಾಟಕ ರಕ್ಷಣಾ ಸೇನೆಯಿಂದ ಕೊಳಚೆ ನಿರ್ಮೂಲನಾ ಮಂಡಳಿ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಹುಬ್ಬಳ್ಳಿ ವಾರ್ಡ್ ನಂ.41ರ ಜೆ.ಪಿ. ನಗರದಲ್ಲಿರುವ ಕೊಳಚೆ ಪ್ರದೇಶದಲ್ಲಿ ಸುಮಾರು 35-40 ವರ್ಷಗಳಿಂದ ಕುಟುಂಬ ಸಮೇತವಾಗಿ ವಾಸಿಸುತ್ತಿದ್ದು, ಇಲ್ಲಿಯೇ ತಮ್ಮ ಜೀವನವನ್ನು ಕಟ್ಟಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಕೊಳಗೇರಿ ನಿವಾಸಿಗಳಿಗೆ ಹಕ್ಕುಪತ್ರ ವಿತರಿಸಬೇಕು ಎಂದು ಆಗ್ರಹಿಸಿದರು.
ಇಲ್ಲಿನ ಜನರು ಕಾಲ ಕಾಲಕ್ಕೆ ನೀರಿನ ಕರ, ವಿದ್ಯುತ್ ಕರ ಸೇರಿದಂತೆ ಎಲ್ಲಾ ರೀತಿಯ ಕರ ಪಾವತಿಸುತ್ತಾ ಬಂದಿದ್ದಾರೆ. ಆದರೆ ಕೊಳಚೆ ಮಂಡಳಿಯವರು ಪರಿಚಯ ಪತ್ರವನ್ನು ಮಾತ್ರ ನೀಡಿದ್ದಾರೆ. ಕೂಡಲೇ ಹಕ್ಕುಪತ್ರ ವಿತರಣೆ ಮಾಡುವ ಮೂಲಕ ಸಾರ್ವಜನಿಕ ಹಿತಾಸಕ್ತಿ ಕಾಪಾಡಬೇಕು ಎಂದು ಮನವಿ ಮೂಲಕ ಒತ್ತಾಯಿಸಿದರು.